Advertisement
ಮಂಗಳೂರಿನ ವೈದ್ಯರೊಬ್ಬರು ಆಸ್ಪತ್ರೆಯಲ್ಲಿದ್ದಾಗ ಕರೆ ಮಾಡಿದ ಅಪರಿಚಿತ ವ್ಯಕ್ತಿಯೋರ್ವ ನಿಮ್ಮ ಕ್ರೆಡಿಟ್ ಕಾರ್ಡ್ ಪಾಯಿಂಟ್ ಗಳನ್ನು ಬಳಸಿಕೊಳ್ಳಲು ಇಂದು ಕೊನೆಯ ದಿನಾಂಕವಾಗಿದೆ. ಕೂಡಲೇ ಅದನ್ನು ನಗದೀಕರಣ ಮಾಡಿ ಇಲ್ಲವೆ ಗಿಫ್ಟ್ ಪಡೆದುಕೊಳ್ಳಿ ಎಂದು ಹೇಳಿದ್ದಾನೆ.
ವೈದ್ಯರು ಹಣ ಕಳೆದುಕೊಂಡ ಮರುದಿನ ಮತ್ತೂಂದು ಸಂಖ್ಯೆಯಿಂದ ಕರೆ ಮಾಡಿದ ಅಪರಿಚಿತ, ನೀವು ನಿನ್ನೆ ಕಳೆದುಕೊಂಡ ಹಣವನ್ನು ವಾಪಸ್ ತೆಗೆದುಕೊಡುತ್ತೇವೆ. 10,000 ರೂ. ಮುಂಗಡವಾಗಿ ನೀಡಿ ಎಂದಿದ್ದಾನೆ. ವೈದ್ಯರು ಅದಕ್ಕೆ ನಿರಾಕರಿಸಿದ್ದಾರೆ.
Related Articles
ಕ್ರೆಡಿಟ್ ಕಾರ್ಡ್‌ನ ಮಾಹಿತಿ ಯನ್ನು ಯಾರೊಂದಿಗೂ ಹಂಚಿಕೊಳ್ಳ ಬಾರದು. ಯಾವುದೇ ಕಾರಣಕ್ಕೂ ಒಟಿಪಿಯನ್ನು ಯಾರಿಗೂ ನೀಡ ಬಾರದು ಎಂದು ಸೈಬರ್ ಭದ್ರತಾ ತಜ್ಞರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
Advertisement
ಸೈಬರ್ ವಲ್ಚರ್‌ಗಳ ಬಗ್ಗೆ ಎಚ್ಚರದಿಂದಿರಿವಂಚನೆಗೊಳಗಾದವರಿಗೆ ಕರೆ ಮಾಡುವ ವ್ಯಕ್ತಿಗಳು ಹಣ ವಾಪಸ್ ಕೊಡಿಸುವುದಾಗಿ ಹೇಳಿ ವಂಚಿಸುವ ಪ್ರಕರಣಗಳು ಮತ್ತೆ ವರದಿಯಾಗುತ್ತಿವೆ. ಇಂತಹ ವಂಚಕರನ್ನು ಸೈಬರ್ ವಲ್ಚರ್ಸ್ ಎಂದು ಕರೆಯಲಾಗುತ್ತದೆ. ಈ ಬಗ್ಗೆಯೂ ಎಚ್ಚರ ವಹಿಸಬೇಕು. ಸೈಬರ್ ವಂಚಕರು ತಾವು ವಂಚಿಸಲು ಗುರಿಯಾಗಿರಿಸಿದ ವ್ಯಕ್ತಿ ಅಗತ್ಯ ತುರ್ತು ಕೆಲಸದಲ್ಲಿದ್ದಾಗಲೇ ಯಾಮಾರಿಸಲು ಯತ್ನಿಸುತ್ತಾರೆ ಎಂದು ಮಂಗಳೂರಿನ ಸೈಬರ್ ತಜ್ಞ ಡಾ| ಅನಂತ ಪ್ರಭು ಗುರುಪುರ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.