Advertisement
ಚಾಲಕ ಕಾರ್ತಿಕ್ ಆರ್. ಶೆಟ್ಟಿ (30) ಮತ್ತು ಬಸ್ ನಿರ್ವಾಹಕ ದಂಸಿರ್ (30) ಬಂಧಿತರು. ಅವರ ಮೇಲೆ ಐಪಿಸಿ 304 (ನಿರ್ಲಕ್ಷ್ಯದ ಕೊಲೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Related Articles
ಬಸ್‌ಗಳಲ್ಲಿ ಎಚ್ಚರ ವಹಿಸಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಬಸ್ ಮಾಲಕರು, ಚಾಲಕರು, ನಿರ್ವಾಹಕರ ಸಭೆ ಕರೆಯಲು ಎಸಿಪಿ ಗೀತಾ ಕುಲಕರ್ಣಿ ಅವರಿಗೆ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಈ ರೀತಿಯ ಅಪರಾಧಗಳು ಪುನರಾವರ್ತನೆಯಾಗದಂತೆ ಜಾಗೃತಿ ಮೂಡಿಸಲಾಗುವುದು ಎಂದು ಕಮಿಷನರ್ ತಿಳಿಸಿದರು.
Advertisement
ಫುಟ್‌ಬೋರ್ಡ್ ಪ್ರಯಾಣ-ಸಿಬಂದಿಯೇ ಹೊಣೆಬಸ್ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನೇತಾಡುವುದು ಕಂಡರೆ ಕೂಡಲೇ ಬಸ್‌ಗಳನ್ನು ನಿಲ್ಲಿಸಿ, ಪ್ರಯಾಣಿಕರು ಬಸ್‌ನೊಳಗೆ ಬರಲು ಸೂಚನೆ ನೀಡಿ. ಬಸ್‌ನೊಳಗೆ ಪ್ರಯಾಣಿಕ ಬಾರದೆ ಬಸ್ ಚಲಾಯಿಸಬೇಡಿ. ಈ ರೀತಿಯ ಕಠಿನ ನಿರ್ಧಾರ ತೆಗೆದುಕೊಳ್ಳದಿದ್ದರೆ ಅಪವಾದಕ್ಕೆ ಬಸ್ ಸಿಬಂದಿಯೇ ಹೊಣೆಯಾಗಬೇಕಾಗುತ್ತದೆ. ಅದೇ ಯುವಕರು ಶೋಕಿ ಮನಃಸ್ಥಿತಿ ಬಿಟ್ಟು ಜೀವದ ಬಗ್ಗೆ ಎಚ್ಚರ ವಹಿಸಿ ಎಂದು ಎಚ್ಚರಿಕೆ ನೀಡಿದರು.