Advertisement

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

12:49 AM Oct 06, 2022 | Team Udayavani |

ದಾವಣಗೆರೆ: ಅಪ್ರಾಪ್ತ ವಯಸ್ಕಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು, 30 ಸಾವಿರ ದಂಡ, ಸಂತ್ರಸ್ತೆಗೆ ಪರಿಹಾರ ರೂಪದಲ್ಲಿ 5 ಲಕ್ಷ ರೂ. ನೀಡುವಂತೆ ತೀರ್ಪು ನೀಡಿದೆ.

Advertisement

ಚನ್ನಗಿರಿ ತಾಲೂಕಿನ ಸಿದ್ದನಮಠದ ಚಂದ್ರಪ್ಪ ಶಿಕ್ಷೆಗೊಳಗಾದ ಆರೋಪಿ. ಅಡಕೆ ಸುಲಿಯುವ ಕೆಲಸಕ್ಕೆ ಹೋಗುತ್ತಿದ್ದ ತನ್ನ ಮಗಳನ್ನು ಪರಿಚಯ ಮಾಡಿಕೊಂಡ ಚಂದ್ರಪ್ಪ ಪ್ರೀತಿಸುವುದಾಗಿ ಪೀಡಿಸಿ ಮದುವೆ ಆಗುವುದಾಗಿ ನಂಬಿಸಿದ್ದ. ಬಳಿಕ ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ ಎಂದು ಸಂತ್ರಸ್ತೆಯ ತಾಯಿ 2020ರಲ್ಲಿ ಸಂತೇಬೆನ್ನೂರು ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಜಿಲ್ಲಾ ಮತ್ತು ಸತ್ರ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಎನ್‌. ಶ್ರೀಪಾದ್‌ ಅವರು, ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿದ್ದಾರೆ. ಸಂತ್ರಸ್ತೆಗೆ ಪರಿಹಾರ ರೂಪದಲ್ಲಿ 5 ಲಕ್ಷ ರೂ. ನೀಡಬೇಕು ಎಂದು ದಾವಣಗೆರೆ ಜಿಲ್ಲಾ ಉಚಿತ ಸೇವಾ ಕಾನೂನು ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಅಭಿಯೋಜನೆ ಪರ ವಿಶೇಷ ಸರಕಾರಿ ಅಭಿಯೋಜಕಿ ರೇಖಾ ಎಸ್‌. ಕೋಟೆಗೌಡರ್‌ ವಾದ ಮಂಡಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next