Advertisement

ಬೆಂಗಳೂರು ಮೂಲದ ವ್ಯಕ್ತಿ ದರ್ಬೆಯ ಲಾಡ್ಜ್ ನಲ್ಲಿ ಆತ್ಮಹತ್ಯೆ

12:33 AM Oct 20, 2022 | Team Udayavani |

ಪುತ್ತೂರು: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಮೃತದೇಹ ದರ್ಬೆಯಲ್ಲಿರುವ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅ. 18ರ ತಡರಾತ್ರಿ ಪತ್ತೆಯಾಗಿದೆ.

Advertisement

ಸುಮಾರು 51 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟವರಾಗಿದ್ದು, ಅವರು ಅ. 16ರಂದು ಪುತ್ತೂರಿಗೆ ಬಂದು ಲಾಡ್ಜ್ ನಲ್ಲಿ ರೂಮ್‌ ಬುಕ್‌ ಮಾಡಿದ್ದರು. ಅ. 18ರ ತಡರಾತ್ರಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪುತ್ತೂರು ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾ ರೆ. ಮೃತರ ಗುರುತು ಪತ್ತೆಗಾಗಿ ತನಿಖೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next