Advertisement
ಪಿಎಫ್ಐಯ ವಿದ್ಯಾರ್ಥಿ ಸಂಘಟನೆಯಾಗಿದ್ದ ಸಿಎಫ್ಐ (ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಜತೆಗೆ ಕಾರ್ಯನಿರ್ವಹಿಸುತ್ತಿದ್ದ ಶಾಹೀನ್ ಗ್ಯಾಂಗ್ ಹಿಂದೂ ವಿದ್ಯಾರ್ಥಿನಿಯರನ್ನು ಮುಸ್ಲಿಂ ಯುವಕರಿಗೆ ಪರಿಚಯಿಸಿ ವಿದ್ಯಾರ್ಥಿನಿಯರು ಪ್ರೀತಿಯ ಬಲೆಗೆ ಬೀಳುವಂತೆ ಮಾಡುತ್ತಿತ್ತು. ಅನಂತರ ಲವ್ ಜೆಹಾದ್‌ಗೆ ಸಹಕರಿಸುತ್ತಿತ್ತು. ಶಾಹೀನ್ ಗ್ರೂಪ್‌ಗೆ ಕೂಡ ಪಿಎಫ್ಐನಿಂದ ತರಬೇತಿ ನೀಡಲಾಗುತ್ತಿತ್ತು. ಈ ಗುಂಪು ದ.ಕ., ಉಡುಪಿ, ಕೊಡಗು, ಶಿವಮೊಗ್ಗ ಮೊದಲಾದೆಡೆ ಹೆಚ್ಚು ಕ್ರಿಯಾಶೀಲವಾಗಿತ್ತು ಎಂದು ಮೂಲಗಳು ತಿಳಿಸಿವೆ.
ಡಿಜೆ ಹಳ್ಳಿ ಮಾದರಿಯಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಮಂಗಳೂರು ಸಹಿತ ದ.ಕ. ಜಿಲ್ಲೆಯ ವಿವಿಧೆಡೆ ಎನ್‌ಐಎ ಜತೆ ದಾಳಿ ನಡೆಸಿದ್ದ ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಮತ್ತು ಎಸ್‌ಪಿ ಕಚೇರಿಗೆ ಆಗಮಿಸಿ ಸಾಕ್ಷ್ಯ ಸಂಗ್ರಹ ಪ್ರಕ್ರಿಯೆ ನಡೆಸಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆ, ಗಲಭೆಗಳ ಬಗ್ಗೆ, ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಸೇರಿದಂತೆ ಹಲವೆಡೆ ನಡೆದ ಚಟುವಟಿಕೆಗಳ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.