ಕೋಲ್ಕತಾ: ಪಶ್ಚಿಮ ಬಂಗಾಳದ ಕೋಲ್ಕತಾ ಸಮೀಪದ ಬ್ಯಾರಕ್‌ಪುರದಲ್ಲಿ ಕಚ್ಚಾ ಬಾಂಬ್ ಅನ್ನು ಬಾಲ್ ಎಂದು ತಪ್ಪಾಗಿ ಭಾವಿಸಿ ಆಟವಾಡುತ್ತಿದ್ದಾಗ ಅದು ಸ್ಫೋಟಗೊಂಡ ಪರಿಣಾಮ ಏಳು ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಘಟನೆಯಲ್ಲಿ 10 ವರ್ಷದ ಬಾಲಕನಿಗೆ ಗಾಯವಾಗಿದೆ. ಮಂಗಳವಾರ ಮುಂಜಾನೆ 6.30ರ ಸುಮಾರಿಗೆ ಘಟನೆ ನಡೆದಿದೆ.
ಇಬ್ಬರು ಬಾಲಕರು ಕಚ್ಚಾ ಬಾಂಬ್ ಅನ್ನು ಬಾಲ್ ಎಂದು ಭಾವಿಸಿ ಆಟುವಾಡುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ.
ಸ್ಥಳೀಯರು ಇಬ್ಬರು ಬಾಲಕರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಅಲ್ಲಿಂದ ಕೋಲ್ಕತಾ ವೈದ್ಯಕೀಯ ಕಾಲೇಜಿಗೆ ಬಾಲಕರನ್ನು ಸ್ಥಳಾಂತರಿಸಲಾಗಿದೆ.
ಘಟನಾ ಸ್ಥಳದಿಂದ ಬಾಂಬ್ ನಿಷ್ಕ್ರಿಯ ದಳವು ಮತ್ತೊಂದು ಕಚ್ಚಾ ಬಾಂಬ್ ಅನ್ನು ನಿಷ್ಕ್ರಿಯಗೊಳಿಸಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.