Advertisement
ಬೆಳಗರಹಳ್ಳಿಯ ಮಲ್ಲಿಕಾರ್ಜುನ್ ಅವರ ಪತ್ನಿ ಮಮತಾ (34) ಮೃತ ದುರ್ದೈವಿ. 15 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಮಕ್ಕಳಿರಲಿಲ್ಲ.
ದಂಪತಿಯ ಬಗ್ಗೆ ಮಾಹಿತಿ ಪಡೆದುಕೊಂಡ ನಕಲಿ ವೈದ್ಯ ದಂಪತಿ, ಐವಿಎಫ್ ಚಿಕಿತ್ಸೆ ನೀಡುತ್ತೇವೆ ಎಂದು ನಂಬಿಸಿ ದಂಪ 4 ಲಕ್ಷ ರೂ. ಪಡೆದು 4 ತಿಂಗಳ ಕಾಲ ಅವೈಜ್ಞಾನಿಕವಾಗಿ ನಕಲಿ ಐವಿಎಫ್ ಚಿಕಿತ್ಸೆ ನೀಡಿದ್ದಾರೆ. ಅನಂತರ ಗರ್ಭದಲ್ಲಿ ಮಗು ಬೆಳೆಯುತ್ತಿದೆ ಎಂದು ನಂಬಿಸಿ ಮತ್ತಷ್ಟು ಹಣ ಪಡೆದಿದ್ದಾರೆ. ಆದರೆ ಕೆಲವು ದಿನಗಳ ಬಳಿಕ ಮಮತಾಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆ ದಾಖಲಾದಾಗ ನಕಲಿಗಳ ಅಸಲಿ ಸತ್ಯ ಬಯಲಾಗಿ ಮಮತಾ ಗರ್ಭಿಣಿಯಾಗಿಲ್ಲ ಎಂಬುದು ತಿಳಿಯಿತು.
Related Articles
ತೀವ್ರ ಅನಾರೋಗ್ಯಕ್ಕೆ ಒಳಗಾದ ಮಮತಾ ನಕಲಿ ಚಿಕಿತ್ಸೆ ಪರಿಣಾಮವಾಗಿ ಗರ್ಭಕೋಶ, ಕಿಡ್ನಿ, ಹೃದಯ ಹಾಗೂ ಮೆದುಳು ಸಂಬಂಧಿಸಿದ ಕಾಯಿಲೆಗೆ ತುತ್ತಾಗಿದ್ದು, ಬೆಂಗಳೂರು ಸೈಂಟ್ ಜಾನ್ ಆಸ್ಪತ್ರೆ ಹಾಗೂ ತುಮಕೂರಿನ ಶ್ರೀದೇವಿ ಆಸ್ಪತ್ರೆಯಲ್ಲಿ ಸತತ ಮೂರು ತಿಂಗಳು ಲಕ್ಷಾಂತರ ಖರ್ಚು ಮಾಡಿ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದ ಕಾರಣ ನಗರದ ಸರಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅಲ್ಲಿ ಶನಿವಾರ ಮೃತಪಟ್ಟಿದ್ದಾರೆ.
Advertisement
ಹಲವರಲ್ಲಿ ಆತಂಕಮೃತ ಮಮತಾ ಜತೆ ಇದೇ ಗ್ರಾಮದ ಹಲವು ದಂಪತಿ ಈ ನಕಲಿ ವೈದ್ಯರಿಂದ ಐವಿಎಫ್ ಚಿಕಿತ್ಸೆ ಪಡೆದಿದ್ದು, ಅವರೆಲ್ಲರೂ ಆತಂಕಕ್ಕೆ ಒಳಗಾಗಿದ್ದಾರೆ.