ಬೆಂಗಳೂರು: ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಟೆಕ್ಕಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೇಗೂರು ನಿವಾಸಿ ಇಮ್ರಾನ್(32) ಬಂಧಿತ. ಆರೋಪಿಯಿಂದ ಐದು ಲಕ್ಷ ರೂ. ಮೌಲ್ಯದ ಐದು ಕೆ.ಜಿ. ಗಾಂಜಾ, ತೂಕದ ಯಂತ್ರ, ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿ ತಲೆ ಮೆರೆಸಿಕೊಂಡಿರುವ ಆಂಧ್ರ ಮೂಲದ ಮತ್ತೂಬ್ಬ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ತಲೆಮರೆಸಿಕೊಂಡಿರುವ ಆರೋಪಿ ಜತೆ ಎರಡು ವರ್ಷಗಳಿಂದ ಸಂಪರ್ಕ ಹೊಂದಿರುವ ಇಮ್ರಾನ್, ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿಸಿ ನಗರಕ್ಕೆ ತರುತ್ತಿದ್ದ. ಇಲ್ಲಿ 20 ಗ್ರಾಂ ಪ್ಯಾಕೆಟ್‌ಗಳಾಗಿ ಮಾಡಿ ಪ್ರತಿ ಪ್ಯಾಕೆಟ್ 1,500 ರೂ.ನಿಂದ 2000 ರೂ.ವರೆಗೆ ಮಾರಾಟ ಮಾಡುತ್ತಿದ್ದ. ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರಿಗೆ ಹೆಚ್ಚು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು. ಬೇಗೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.