Advertisement
2021ರ ಡಿ. 28ರಂದು ನಾಲ್ಕೇರಿ ಗ್ರಾಮದಲ್ಲಿ ಕೊಕ್ಕೆ ಚಾಕು ವ್ಯಕ್ತಿಯಿಂದ ದಾಳಿಗೊಳಗಾದ ಬೆಳೆಗಾರ ಸುಳ್ಳಿಮಾಡ ಪಿ. ತಿಮ್ಮಯ್ಯ ಅವರ ಪುತ್ರ ಸುಳ್ಳಿಮಾಡ ಟಿ.ಪೊನ್ನಪ್ಪ ಅವರು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ| ಬಿ.ಸಿ.ಸತೀಶ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರಿಗೆ ಮಂಗಳವಾರ ದೂರು ಸಲ್ಲಿಸಿದರು.
Related Articles
ನಾಲ್ಕೇರಿ ಗ್ರಾಮದಲ್ಲಿ ವೃದ್ಧರೇ ಇರುವ ಮನೆಗಳನ್ನು ಗುರಿಯಾಗಿಸಿ ಈತ ದಾಳಿ ಮಾಡುತ್ತಿದ್ದಾನೆ. ನನ್ನ ತಂದೆ ತಿಮ್ಮಯ್ಯ ಹಾಗೂ ತಾಯಿ ಪಾರ್ವತಿ ಅವರು ಮನೆಯಲ್ಲಿದ್ದಾಗ ಡಿ.28ರಂದು ಮಧ್ಯಾಹ್ನ ಆತ ದಿಢೀರ್ ಪ್ರವೇಶಿಸಿದ್ದಾನೆ. ತಾಯಿಗೆ ಕೊಕ್ಕೆ ಚಾಕು ತೋರಿಸಿ ಬೆದರಿಸಿ, ಕೋಣೆಯಲ್ಲಿದ್ದ ತಂದೆ ಬಂದು ಗದರಿದಾಗ ಇಬ್ಬರಿಗೂ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ತಂದೆ ತೀವ್ರವಾಗಿ ಗಾಯಗೊಂಡಿದ್ದು, ತಾಯಿ ಜೋರಾಗಿ ಕಿರುಚಿಕೊಂಡಾಗ ಆತ ಕಾಲ್ಕಿತ್ತಿದ್ದಾನೆ. “ದುಡ್ಡು, ದುಡ್ಡು, ರಕ್ತ’ ಎಂದಷ್ಟೇ ಈತ ಹೇಳುತ್ತಿರುತ್ತಾನೆ. ಮನೆಯಲ್ಲಿ ನಾಲ್ಕು ನಾಯಿಗಳಿದ್ದು, ಅಪರಿಚಿತ ಬಂದರೂ ಬೊಗಳ ದಿರುವುದು ಆಶ್ಚರ್ಯ ಮೂಡಿಸಿದೆ ಎಂದು ಪೊನ್ನಪ್ಪ ಅವರು ತಿಳಿಸಿದ್ದಾರೆ.
Advertisement
ತೇಲಪಂಡ ಶಿವಕುಮಾರ್ ನಾಣಯ್ಯ ಮಾತನಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಳ್ಳನ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಗೃಹ ಸಚಿವರಿಗೆ ದೂರು ನೀಡಬೇಕಾಗುತ್ತದೆ ಎಂದರು.
ಆತನ ಬಂಧನಕ್ಕೆ ಹಿರಿಯ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಬೇಕೆಂದು ಆಗ್ರಹಿಸಿದರು.