Advertisement

ಬೋಟಿನಿಂದ ಮೀನು ಇಳಿಸುತ್ತಿದ್ದಾಗ ನೀರಿಗೆ ಬಿದ್ದು ಮೀನುಗಾರ ಸಾವು

11:51 PM Sep 05, 2022 | Team Udayavani |

ಮಲ್ಪೆ: ಮಲ್ಪೆ ಬಂದರಿನಲ್ಲಿ ನಿಲ್ಲಿಸಿದ್ದ ಬೋಟಿನಿಂದ ಮೀನು ಖಾಲಿ ಮಾಡುತ್ತಿರುವಾಗ ಮೀನುಗಾರರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸೆ. 4ರ ರಾತ್ರಿ 10.45ರ ವೇಳೆ ಸಂಭವಿಸಿದೆ.

Advertisement

ಮಲ್ಪೆ ತೊಟ್ಟಂನ ಪುರಂದರ ಮೆಂಡನ್‌ (42) ಮೃತಪಟ್ಟವರು. ಹನುಮನಿಧಿ ಕನ್ನಿ ಪಾರ್ಟಿಯಲ್ಲಿ ದುಡಿಯುತ್ತಿದ್ದ ಅವರು ಬೋಟಿನಿಂದ ಮೀನು ಖಾಲಿ ಮಾಡುವಾಗ ಜಾರಿ ಬಿದ್ದರೆನ್ನಲಾಗಿದೆ. ಮಾಹಿತಿ ತಿಳಿದು ತತ್‌ಕ್ಷಣ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ನೀರಿಗೆ ಹಾರಿ ಪುರಂದರ ಅವರನ್ನು ಮೇಲಕ್ಕೆತ್ತಿದ್ದಾರೆ. ತೀವ್ರ ಅಸ್ವಸ್ಥಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

ಮಲ್ಪೆ ಬಂದರಿನಲ್ಲಿ ಹಲವಾರು ವರ್ಷಗಳಿಂದ ಮೀನುಗಾರಿಕೆ ವೃತ್ತಿ ಯನ್ನು ಮಾಡಿಕೊಂಡಿದ್ದ ಅವರು ಮಲ್ಪೆ ಕನ್ನಿ ಮೀನುಗಾರರ ಸಂಘದ ಸದಸ್ಯರಾಗಿದ್ದರು. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next