ವಿಟ್ಲ : ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿನ ಬಾಡಿಗೆ ಮನೆ ನಿವಾಸಿ ಸಂಜೀವ ಅವರ ಅಪ್ರಾಪ್ತ ವಯಸ್ಸಿನ ಪುತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಸಾಹುಲ್ ಹಮೀದ್ ಯಾನೆ ಕುಟ್ಟ ಅವನು ಬಂಧಿತ ಆರೋಪಿ. ಈತನ ವಿರುದ್ದ ಆತ್ಮಹತ್ಯೆಗೆ ದುಷೆøàರಣೆ ನೀಡಿದ ಆರೋಪಲ್ಲಿ ದೂರು ನೀಡಿದ್ದು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಆರೋಪಿ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್ ಹಮೀದ್ ಯಾನೆ ಕುಟ್ಟನ ಪತ್ತೆಗೆ ಎರಡು ತಂಡಗಳನ್ನು ರಚಿಸಿ ಪತ್ತೆಗೆ ಪ್ರಯತ್ನಿಸಿದ್ದು ಮೇ 5ರಂದು ರಾತ್ರಿ ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿಂದ ವಶಕ್ಕೆ ಪಡೆದು ದಸ್ತಗಿರಿ ಮಾಡಿರುವುದಾಗಿದೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ ಸೋನಾವಣೆ ಮತ್ತು ಅಡಿಷನಲ್ ಎಸ್ಪಿ ಕುಮಾರಚಂದ್ರ ಅವರ ಮಾರ್ಗದರ್ಶನ, ಬಂಟ್ವಾಳ ಉಪವಿಭಾಗದ ಎಎಸ್ಪಿ ಶಿವಾಂಶು ರಜಪೂತ ಅವರ ನೇತೃತ್ವ, ವಿಟ್ಲ ಠಾಣೆ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್.ಈ. ಅವರ ಸಾರಥ್ಯದಲ್ಲಿ, ಪಿಎಎಸ್‌ಐ ಸಂದೀಪ ಕುಮಾರ್ ಶೆಟ್ಟಿ, ಪಿಎಎಸ್‌ಐ ಮಂಜುನಾಥ ಟಿ., ಸಿಬಂದಿಗಳಾದ ಡ್ಯಾನಿ ಫ್ರಾನ್ಸಿಸ್ , ಪ್ರಸನ್ನ, ಸೀತಾರಾಮ, ಹೇಮರಾಜ, ಅಶೋಕ್, ಶ್ರೀಧರ, ಕುಮಾರ ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್ ಕುಮಾರ್, ದಿವಾಕರ ಅವರು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.