ಮಂಗಳೂರು: ಬಸ್ಗೆ ಹಿಂಬದಿಯಿಂದ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಟಿಕಾನದಲ್ಲಿ ರವಿವಾರ ಸಂಭವಿಸಿದೆ.
ಬಂಟ್ವಾಳ ತೌಡುಗೋಳಿ ನಿವಾಸಿ ಇರ್ಫಾನ್ (28) ಮೃತಪಟ್ಟವರು. ಅವರು ಕೊಟ್ಟಾರಚೌಕಿ ಕಡೆಯಿಂದ ಕೆಪಿಟಿ ಕಡೆಗೆ ಬರುತ್ತಿದ್ದಾಗ ಎದುರಿನಲ್ಲಿ ಹೋಗುತ್ತಿದ್ದ ಖಾಸಗಿ ಬಸ್ ಚಾಲಕ ಬಸ್ ಅನ್ನು ಎ.ಜೆ. ಆಸ್ಪತ್ರೆ ಬಳಿ ಏಕಾಏಕಿ ನಿಲ್ಲಿಸಿದ್ದ.
ಪರಿಣಾಮ ನಿಯಂತ್ರಣ ಕಳೆದುಕೊಂಡ ಇರ್ಫಾನ್ ಅವರು ಸವಾರಿ ಮಾಡುತ್ತಿದ್ದ ಸ್ಕೂಟರ್ ಬಸ್ಗೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು.
ಇದನ್ನೂ ಓದಿ:ಬೈಕಾಡಿ : ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಗಂಭೀರ ಗಾಯಗೊಂಡ ಇರ್ಫಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟಿದ್ದಾರೆ. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.