ಪುತ್ತೂರು: ಕಬಕ ಸಮೀಪದ ಮಿತ್ತೂರಿನಲ್ಲಿ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಸಂಭವಿಸಿದೆ.
ಕಡಬ ತಾಲೂಕಿನ ಕೊಯಿಲ ಗ್ರಾಮದ ಪುಣಿಕೆತ್ತಡಿ ನಿವಾಸಿ ಕಾರ್ತಿಕ್(24) ಮೃತಪಟ್ಟ ಯುವಕ.
ಮಿತ್ತೂರಿನಲ್ಲಿ ಕಿರು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮುಂಭಾಗದಿಂದ ಬರುತ್ತಿದ್ದ ರೈಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮುಂಬಯಿಯಲ್ಲಿ ಉದ್ಯೋಗದಲ್ಲಿದ್ದ ಕಾರ್ತಿಕ್ ಕೆಲವು ವರ್ಷದ ಹಿಂದೆ ಊರಿಗೆ ಬಂದು ಮೇಸ್ತ್ರಿ ಕೆಲಸ ಮಾಡುತ್ತಿದ್ದರು.
Related Articles
ಇದನ್ನೂ ಓದಿ:ಭಟ್ಕಳ: ಲಂಗರು ಹಾಕಿದ ಬೋಟ್ ಪಲ್ಟಿಯಾಗಿ ಲಕ್ಷಾಂತರ ರೂ. ನಷ್ಟ
ಮೂರು ದಿನಗಳ ಹಿಂದೆ ಮಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದ ಅವರು ಮೇ 15ರಂದು ರಾತ್ರಿ ಸುಮಾರು 9.30ಕ್ಕೆ ಮನೆಗೆ ಫೋನ್ ಮಾಡಿದ್ದರು. ಬಸ್ ಸಿಗದ ಹಿನ್ನೆಲೆಯಲ್ಲಿ ಮಿತ್ತೂರಿನಲ್ಲಿ ಸೇತುವೆ ಮೂಲಕ ಉಪ್ಪಿನಂಗಡಿ ಸಂಪರ್ಕಿಸುವ ಪ್ರಯತ್ನ ನಡೆಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿರಬಹುದು ಎಂದು ರೈಲ್ವೇ ಪೊಲೀಸರು ಶಂಕಿಸಿದ್ದಾರೆ.
ಮಂಗಳೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.