Advertisement
ಮೂರು ಎಕರೆ ಪೈಸಾರಿಯ ಪಣಿ ಎರವರ ಮುತ್ತ ಅವರ ಮನೆಗೆ ಬಂದ ಕೇರಳದ ಮಾನಂದವಾಡಿಯ ಕುರಿಯಚ್ಚನ್ ಹಾಗೂ ಆತನ ಪತ್ನಿ ಬಲವಂತದ ಮತಾಂತರಕ್ಕೆ ಯತ್ನಿಸಿರುವುದಲ್ಲದೆ ಆಮಿಷವೊಡ್ಡಿರುವುದಾಗಿ ಆರೋಪಿಸಲಾಗಿದೆ. ಕುಟ್ಟ ಪೊಲೀಸ್ ಠಾಣೆಗೆ ದೂರು ನೀಡಿರುವ ಮುತ್ತ ತಮ್ಮನ್ನು ಮತಾಂತರಗೊಳಿಸಲು ದಂಪತಿ ಪ್ರಯತ್ನಿಸಿದರು ಎಂದು ತಿಳಿಸಿದ್ದಾರೆ.
Related Articles
Advertisement
ಖಂಡನೆವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ ಅವರು ಮತಾಂತರ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೊಡಗಿನ ದುರ್ಬಲ ವರ್ಗವನ್ನು ಗುರಿಯಾಗಿಸಿಕೊಂಡು ಆಮಿಷವೊಡ್ಡುವ ಮೂಲಕ ಬಲವಂತದ ಮತಾಂತರ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಜಾರಿಗೆ ಬಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತಂದು ಕಠಿನ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ.