ಪುತ್ತೂರು: ಅಜ್ಜಿಗೆ ಮನೆಗೆ ಬಿಡುವೆನೆಂದು ಹೇಳಿ ಅಪ್ರಾಪ್ತ ಬಾಲಕನನ್ನು ದಾರಿ ಮಧ್ಯೆ ಅಪರಿಚಿತ ವ್ಯಕ್ತಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ 22 ದಿನಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ನೆಕ್ರಾಜೆ ನಿವಾಸಿ ಶ್ರೀಜಿತ್ ಬಂಧಿತ ಆರೋಪಿ. ಎ.22 ರಂದು ಈ ಕೃತ್ಯ ನಡೆದಿತ್ತು. ಈ ಕುರಿತು ಬಾಲಕನ ಮನೆ ಮಂದಿ ಸಂಪ್ಯ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ಕೈಗೆತ್ತಿಕೊಂಡ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವನೆ ಭಗವಾನ್, ಅಪರ ಅಧೀಕ್ಷಕ ಕುಮಾರ ಚಂದ್ರ, ಪುತ್ತೂರು ಡಿವೈಎಸ್ಪಿ ಡಾ| ಗಾನ ಪಿ ಕುಮಾರ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಉಪಮೇಶ್ ಉಪ್ಪಳಿಕೆ ಅವರ ನೇತೃತ್ವದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್.ಐ ಉದಯರವಿ ನೇತೃತ್ವದ ತಂಡ ಆರೋಪಿ ಶ್ರೀಜಿತ್‌ನನ್ನು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Related Articles