ಸುಳ್ಯ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದಂತೆ ಮಂಡೆಕೋಲಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡೆಕೋಲಿನ ಅಂಬ್ರೋಟಿ ಕಕ್ಕಾಜೆ ನಿವಾಸಿ ಅಶ್ವಿನ್ ಬಂಧಿತ ಯುವಕ.
ಈತ ಸುಳ್ಯ ತಾಲೂಕಿನ ಪಿಯುಸಿ ವಿದ್ಯಾರ್ಥಿನಿ ಯನ್ನು ಪರಿಚಯ ಮಾಡಿಕೊಂಡಿದ್ದು, ಫೋನ್ ಮೂಲಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.
ಆರೋಪಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ವಿದ್ಯಾರ್ಥಿನಿಯ ಮನೆಯವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.