Advertisement

ಸುಳ್ಯ: ಲೈಂಗಿಕ ದೌರ್ಜನ್ಯ; ಯುವಕನ ಬಂಧನ

05:49 PM May 16, 2022 | Team Udayavani |

ಸುಳ್ಯ: ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾದಂತೆ ಮಂಡೆಕೋಲಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಮಂಡೆಕೋಲಿನ ಅಂಬ್ರೋಟಿ ಕಕ್ಕಾಜೆ ನಿವಾಸಿ ಅಶ್ವಿ‌ನ್‌ ಬಂಧಿತ ಯುವಕ.

ಈತ ಸುಳ್ಯ ತಾಲೂಕಿನ ಪಿಯುಸಿ ವಿದ್ಯಾರ್ಥಿನಿ ಯನ್ನು ಪರಿಚಯ ಮಾಡಿಕೊಂಡಿದ್ದು, ಫೋನ್‌ ಮೂಲಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.

ಆರೋಪಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ವಿದ್ಯಾರ್ಥಿನಿಯ ಮನೆಯವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

 

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next