Advertisement
ಪ್ರಕರಣದ ವಿವರ: ಕೆಲವು ತಿಂಗಳ ಹಿಂದೆ ಬೀಜಾಡಿ ಸಮೀಪ ನಡೆದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸರು ರಾಹಿಕ್‌ನನ್ನು ಬಂಧಿಸಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಂತೆ ಪ್ರಕರಣದ ತನಿಖಾಧಿಕಾರಿಯವರು ಅ. 20ರಂದು ಆರೋಪಿಯನ್ನು ಕುಂದಾಪುರದ ಎ.ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸುವಂತೆ ಆದೇಶಿಸಿದ್ದರು.
ಆರೋಪಿಗಳನ್ನು ಜೈಲಿಗೆ ಕಳುಹಿಸುವ ವೇಳೆ ಬೇಡಿ (ಕೋಳ) ಹಾಕಬೇಕೆಂದು ಕಾನೂನು ತಿಳಿಸುತ್ತದೆ. ಆದರೆ ಪೊಲೀಸರು ಈ ನಿಯಮವನ್ನು ಉಲ್ಲಂಘಿ ಸಿದ್ದಾರೆ. ಖಾಸಗಿ ವಾಹನದಲ್ಲಿ ಹೆಡ್‌ಕಾನ್‌ಸ್ಟೆಬಲ್ ಮಂಜುನಾಥ್ ಹಾಗೂ ಪಿಸಿ ಬಸವನಗೌಡ ಅವರು ಆರೋಪಿಯನ್ನು ಕರೆದುಕೊಂಡು ಬಂದಿದ್ದರು. ಮೇಲ್ನೋಟಕ್ಕೆ ಪೊಲೀಸರ ನಿರ್ಲಕ್ಷ್ಯವೇ ಆರೋಪಿ ತಪ್ಪಿಸಿಕೊಳ್ಳಲು ಕಾರಣ ಎನ್ನಲಾಗಿದೆ. ಆರೋಪಿಯ ಮೇಲೆ ಈ ಹಿಂದೆಯೂ ಕುಂದಾಪುರ ಠಾಣೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿ ಹಲವು ಪ್ರಕರಣಗಳು ದಾಖಲಾಗಿದ್ದವು. ಇಬ್ಬರು ಪೊಲೀಸರನ್ನು ಅಮಾನತು ಮಾಡುವ ಸಾಧ್ಯತೆಗಳಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇನ್ನಷ್ಟೇ ಆದೇಶ ಹೊರಡಿಸಬೇಕಿದೆ.