Advertisement

ಉಡುಪಿ: ದೈವಗಳ ಸೊತ್ತು ಕಳವು ಆರೋಪಿ ಬಂಧನ

01:14 AM May 21, 2022 | Team Udayavani |

ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀ ಸರು ಮೇ 19ರಂದು ಬಂಧಿಸಿದ್ದಾರೆ.

Advertisement

ಹಿರೇಬೆಟ್ಟುವಿನ ಭಾಸ್ಕರ್‌ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಹಿರೇಬೆಟ್ಟುವಿನ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ, ಆರತಿ, ಪಂಚಲೋಹದ ಮುಖ, ಹಿತ್ತಾಳೆ ಸಾಮಗ್ರಿ, ಘಂಟೆ ಸೇರಿದಂತೆ ಸುಮಾರು 50 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿತ್ತು.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next