ವಿಟ್ಲ: ಕನ್ಯಾನ ಗ್ರಾಮದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ಸಹೋದರರ ನಡುವೆ ಜಗಳ ಆರಂಭವಾಗಿ ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ಐತ್ತಪ್ಪ ನಾಯ್ಕ (45) ಬಂಧಿತ ಆರೋಪಿ. ಬಾಳಪ್ಪ ನಾಯ್ಕ ಮೃತರು.
ಎಣ್ಮಕಜೆ ಗ್ರಾಮದ ಅಡ್ಯನಡ್ಕ ನಿವಾಸಿ ಬಾಳಪ್ಪ ನಾಯ್ಕ ಅವರು ಮಂಗಳವಾರ ಸಂಜೆ ತರವಾಡು ಮನೆಗೆ ತನ್ನ ತಾಯಿ ಜತೆ ಬಂದಿದ್ದರು. ಮಂಗಳವಾರ ಹೊಸ ಮನೆಯಲ್ಲಿ ಗೊಂದೋಳು ಪೂಜೆ ನಡೆಯುತ್ತಿದ್ದು, ಈ ವೇಳೆ ಸಹೋದರರಿಬ್ಬರೂ ಹಳೆಮನೆಯಲ್ಲಿ ಜಗಳ ಆರಂಭಿಸಿದ್ದಾರೆ.
ತಕರಾರು ಇರುವ ಜಾಗದಲ್ಲಿ ಬೆಳೆದ ಭತ್ತ ಫಸಲಿನ ಪಾಲಿನ ವಿಚಾರವಾಗಿ ಈ ಗಲಾಟೆ ತಾರಕಕ್ಕೇರಿದೆ. ಸಿಟ್ಟಿನಿಂದ ಅಣ್ಣ ತಮ್ಮನನ್ನು ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ.
Related Articles
ಘಟನ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದರು.