Advertisement
ಭಾನುವಾರ ಮಧ್ಯಾಹ್ನ ತನ್ನ ಮನೆಯ ಟೆರೇಸ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಆಕೆಯ ನೆರೆಮನೆಯ 12 ವರ್ಷದ ಬಾಲಕ ಅತ್ಯಾಚಾರವೆಸಗಿದ್ದಾನೆ ಎಂದು ಉಭಾನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅವಿನಾಶ್ ಸಿಂಗ್ ಹೇಳಿದ್ದಾರೆ.ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಭಾನುವಾರ ರಾತ್ರಿ ಬಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.
Related Articles
Advertisement
ಬಾಲಕಿಯರು ತಮ್ಮ ಮನೆಯ ಹೊರಗೆ ಒಟ್ಟಿಗೆ ಆಟವಾಡುತ್ತಿದ್ದರು ಮತ್ತು ಇದರ ಲಾಭವನ್ನು ಪಡೆದುಕೊಂಡು ಈ ಹಿಂದೆಯೂ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಇಬ್ಬರೂ ಬಾಲಕಿಯರ ಪೋಷಕರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜುಲೈ 9 ರಂದು ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಕರೆ ಬಂದಿತ್ತು ಎಂದು ಉಪ ಪೊಲೀಸ್ ಆಯುಕ್ತ (ವಾಯುವ್ಯ) ಉಷಾ ರಂಗನಾನಿ ಹೇಳಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಬಾಲಕಿಯರಿಬ್ಬರಿಗೂ ಕೌನ್ಸೆಲಿಂಗ್ ನಡೆಸಲಾಯಿತು. ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಲಾಗಿದೆ ಮತ್ತು ಅವರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಅಧಿಕಾರಿ ಹೇಳಿದರು.