ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆಸೈದಾಪುರ: ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ಸೈದಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಭೀಮರಾಯ ಬಂಕ್ಲಿ ತಿಳಿಸಿದರು.
ಪಟ್ಟಣದ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಪಟ್ಟಣದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್ ಠಾಣೆಗೆ ಲಿಖೀತ ಪತ್ರದೊಂದಿಗೆ ಮಾಹಿತಿ ನೀಡಬೇಕು. ಇಲ್ಲವಾದರೆ ಗೃಹ ರಕ್ಷಕ ತಂತ್ರಾಂಶದಲ್ಲಿ ನಿಮ್ಮ ಮನೆಯಿರುವ ಸ್ಥಳದ ಮಾಹಿತಿಯನ್ನು ಸೇರ್ಪಡೆ ಮಾಡಬೇಕು. ಆಗ ಪೊಲೀಸ್ ಗಸ್ತು ನೀಡಲಾಗುವುದು ಎಂದರು.
ಅಪರಾಧ ವಿಭಾಗದ ಪಿಎಸ್‌ಐ ಹಣಮಂತ್ರಾಯ ನಾಯಕ ಮಾತನಾಡಿ, ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಸವಾರರು ತಪ್ಪದೇ ಹೆಲ್ಮಟ್ ಧರಿಸಿ. ನಾಲ್ಕು ಚಕ್ರ ವಾಹನಗಳನ್ನು ಚಲಾಯಿಸುವ ಸವಾರರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಇದರಿಂದ ಅಪಘಾತ ಸಂಭವಿಸಿದಾಗ ಜೀವಕ್ಕೆ ಅಪಾಯ ಕಡಿಮೆ ಯಾಗುತ್ತದೆ. ಸಮಾಜದ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಸನ್ನದ್ಧ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಎಸ್‌ಐ ಭೀಮಣ್ಣ, ಮುಖ್ಯಪೇದೆ ಈರಣ್ಣ, ಪೊಲೀಸ್ ಪೇದೆ ರಮೇಶ ರೆಡ್ಡಿ, ಸಾರ್ವಜನಿಕರು ಸೇರಿದಂತೆ ಇತರರಿದ್ದರು.