Advertisement

Kolkata case; ಮಹಿಳೆಯರ ಮೇಲಿನ ಅಪರಾಧಗಳು ಅಕ್ಷಮ್ಯ: ಪ್ರಧಾನಿ ನರೇಂದ್ರ ಮೋದಿ

03:34 PM Aug 25, 2024 | Team Udayavani |

ನವದೆಹಲಿ: ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿರುವ ನಡುವೆಯೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

Advertisement

ಮಹಾರಾಷ್ಟ್ರದ ಜಲಗಾಂವ್ ನಲ್ಲಿ ‘ಲಖಪತಿ ದೀದಿ ಸಮ್ಮೇಳನ’ದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಮಹಿಳೆಯರ ಸುರಕ್ಷತೆ ಬಹಳ ಮುಖ್ಯ. ಮಹಿಳೆಯರ ಮೇಲಿನ ಅಪರಾಧಗಳು ಅಕ್ಷಮ್ಯ ಎಂದು ನಾನು ಮತ್ತೊಮ್ಮೆ ಪ್ರತಿ ರಾಜ್ಯ ಸರ್ಕಾರಕ್ಕೆ ಹೇಳುತ್ತೇನೆ. ಅಪರಾಧಿಗಳು ಯಾರೇ ಆಗಿರಲಿ, ಅವರನ್ನು ಬಿಡಬಾರದು” ಎಂದು ಹೇಳಿದರು.

“ಲಖಪತಿ ದೀದಿ” ಎಂದರೆ ಸ್ವ-ಸಹಾಯ ಗುಂಪಿನ ಸದಸ್ಯೆ. ಅವರು ವಾರ್ಷಿಕ ₹ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಕುಟುಂಬದ ಆದಾಯವನ್ನು ಗಳಿಸುತ್ತಾರೆ. ಈ ಆದಾಯವನ್ನು ಕನಿಷ್ಠ ನಾಲ್ಕು ಕೃಷಿ ಋತುಗಳು ಮತ್ತು/ಅಥವಾ ವ್ಯಾಪಾರ ಚಕ್ರಗಳಿಗೆ ಲೆಕ್ಕ ಹಾಕಲಾಗುತ್ತದೆ, ಸರಾಸರಿ ಮಾಸಿಕ ಆದಾಯ ₹ 10,000 ಮೀರುತ್ತದೆ.

ಮಹಿಳೆಯ ವಿರುದ್ದದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿರುವರಿಗೆ ಕಠಿಣ ಶಿಕ್ಷೆ ನೀಡಲು ನಾವು ಕಾನೂನನ್ನು ಬಲಪಡಿಸುತ್ತಿದ್ದೇವೆ ಎಂದು ಮೋದಿ ಇದೇ ವೇಳೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next