Advertisement

ಪತ್ರಿಕೆ, ಟಿವಿಗಳಲ್ಲಿ ಕ್ರಿಮಿನಲ್‌ ಪ್ರಕರಣ ಪ್ರಕಟ ಕಡ್ಡಾಯ

01:58 AM Mar 23, 2019 | |

ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ವಿಚಾರಣೆಗೆ ಬಾಕಿ ಇರುವ ಹಾಗೂ ಶಿಕ್ಷೆಗೊಳಪಟ್ಟ ತಮ್ಮ ಮೇಲಿನ ಕ್ರಿಮಿನಲ್‌ ಕೇಸ್‌ಗಳ ವಿವರಗಳನ್ನು ನಾಮಪತ್ರದ ಜತೆಗಿನ ಪ್ರಮಾಣಪತ್ರದಲ್ಲಿ ಘೋಷಿಸಿಕೊಂಡರೆ ಸಾಲದು. ಅವುಗಳ ಬಗ್ಗೆ ದಿನಪತ್ರಿಕೆಗಳು ಹಾಗೂ ಟಿವಿ ಚಾನಲ್‌ಗ‌ಳಲ್ಲಿ ಪ್ರಕಟಣೆ ನೀಡಬೇಕು. ಸುಪ್ರೀಂಕೋರ್ಟ್‌ನ ತೀರ್ಪಿನ ಅನ್ವಯ ಕೇಂದ್ರ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಯಾವುದೇ ಪಕ್ಷವನ್ನು ಪ್ರತಿನಿಧಿಸುತ್ತಿದ್ದರೆ, ತಮ್ಮ ಮೇಲೆ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್‌ ಕೇಸ್‌ಗಳ ಮಾಹಿತಿಗಳನ್ನು ಪಕ್ಷಕ್ಕೆ ಸಲ್ಲಿಸಬೇಕು. ಆ ಕ್ರಿಮಿನಲ್‌ ಕೇಸ್‌ಗಳ ಬಗ್ಗೆ ಪಕ್ಷ ಹಾಗೂ ಅಭ್ಯರ್ಥಿ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚು ಪ್ರಸಾರ ಹೊಂದಿರುವ ದಿನಪತ್ರಿಕೆ ಹಾಗೂ ಎಲೆಕ್ಟ್ರಾನಿಕ್‌ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಮಾಡಬೇಕು. 

Advertisement

ನಾಮಪತ್ರ ಸಲ್ಲಿಸಿದ ಬಳಿಕ ಮತದಾನಕ್ಕೆ ಎರಡು ದಿನ ಬಾಕಿ ಇರುವಾಗಬೇರೆ ಬೇರೆ ದಿನಾಂಕಗಳಲ್ಲಿ ಕನಿಷ್ಠ ಮೂರು ಬಾರಿ ಅದನ್ನು ಪ್ರಕಟಿಸಬೇಕು. ಪಕ್ಷಗಳು ತನ್ನ ಅಭ್ಯರ್ಥಿಯ ಕ್ರಿಮಿನಲ್‌ ಕೇಸ್‌ಗಳಮಾಹಿತಿಯನ್ನು ಪಕ್ಷದ ಅಧಿಕೃತ ವೆಬ್‌ಸೈಟ್‌ಗಳಲ್ಲೂ ಹಾಕಬೇಕು. ಪತ್ರಿಕೆ ಹಾಗೂ ಟಿವಿಗಳಲ್ಲಿ ಪ್ರಕಟಗೊಂಡ ದಾಖಲೆಗಳನ್ನು ಜಿಲ್ಲಾ ಚುನಾವಣಾಧಿಕಾರಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಕ್ರಿಮಿನಲ್‌ ಕೇಸ್‌ಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ಸಲ್ಲಿಸುವ ವೇಳೆ ನಿಗದಿತ ಅರ್ಜಿ ನಮೂನೆಯಲ್ಲಿ ದಪ್ಪಕ್ಷರಗಳಲ್ಲಿ ಅದನ್ನು ನಮೂದಿಸಬೇಕು.

Advertisement

Udayavani is now on Telegram. Click here to join our channel and stay updated with the latest news.

Next