Advertisement

ಇ-ಪಾಸ್ ಇಲ್ಲದೇ ಅನ್ಯ ರಾಜ್ಯಗಳಿಂದ ಅಕ್ರಮ ಪ್ರವೇಶ ಮಾಡಿದ್ರೆ ಕ್ರಿಮಿನಲ್ ಕೇಸ್

01:54 PM May 14, 2020 | keerthan |

ಬೆಳಗಾವಿ: ಮಾರ್ಗಸೂಚಿ ಪ್ರಕಾರ ಸೇವಾಸಿಂಧು ಮೂಲಕ ಸೂಕ್ತ ಅನುಮತಿ ಪತ್ರ (ಇ-ಪಾಸ್‌) ಪಡೆಯದೇ ಕೆಲವರು ನೆರೆಯ ರಾಜ್ಯಗಳಿಂದ ಕಾನೂನು ಬಾಹಿರವಾಗಿ ಅಡ್ಡಮಾರ್ಗದಲ್ಲಿ ಬೆಳಗಾವಿ ಜಿಲ್ಲೆ ಪ್ರವೇಶಿಸುತ್ತಿರುವುದು ಕಂಡು ಬಂದಿದೆ. ಈ ರೀತಿ ಅಕ್ರಮವಾಗಿ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

Advertisement

ಈ ರೀತಿಯ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನು ಬಾಹಿರವಾಗಿರುತ್ತದೆ. ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿದಂತೆ ಇತರೆ ನೆರೆಯ ರಾಜ್ಯಗಳ ಮೂಲಕ ಬೆಳಗಾವಿ ಜಿಲ್ಲೆಯನ್ನು ಯಾರಾದರೂ ಪ್ರವೇಶಿಸಿದ್ದರೆ ಅಂತಹವರು ಸ್ವಯಂ ಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಇದೇ ರೀತಿ ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ಈ ರೀತಿ ಅಕ್ರಮವಾಗಿ ಪ್ರವೇಶಿಸಿದವರು ಒಂದು ವೇಳೆ ಸ್ವಯಂಪ್ರೇರಣೆಯಿಂದ ಮುಂದೆ ಬಂದು ಮಾಹಿತಿ ನೀಡದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ಅನ್ಯ ರಾಜ್ಯಗಳಿಂದ ಅಕ್ರಮವಾಗಿ ಬಂದಿರುವವರ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next