Advertisement
ಶುಕ್ರವಾರ ಪತ್ರಿಕಾ ಗೋಷ್ಠಿ ನಡೆಸಿ,ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿ ಸುವ ಉದ್ದೇಶದಿಂದ ಪರೀಕ್ಷಾ ಪ್ರಶ್ನೆ ಪತ್ರಿಕೆ ಬಗ್ಗೆ ವದಂತಿ ಹಬ್ಬಿಸುವವರಿದ್ದಾರೆ. ಈ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಿದಲ್ಲಿ ಅದನ್ನು ಪರೀಕ್ಷಾ ಅಕ್ರಮಕ್ಕೆ ಸೇರಿಸುವ ಸಂಬಂಧ ನಿಯಮದಲ್ಲೂ ಬದಲಾವಣೆ ತರಲು ಯೋಚನೆ ನಡೆಯುತ್ತಿದೆ ಎಂದರು.
ಎಸೆಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇ ಟಿ)ಯ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸೋರಿಕೆ ಕುರಿತು ವದಂತಿ ಹಬ್ಬಿಸಿರುವುದು ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸಹಿತ ರಾಜ್ಯಾದ್ಯಂತ ಹಲವಾರು ಪ್ರಕರಣ ದಾಖಲಾಗಿವೆ. ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಇದುವರೆಗೆ ಪ್ರಶ್ನೆಪತ್ರಿಕೆಗಳ ಸೋರಿಕೆ ಮಾಡಿದ ಕಿಂಗ್‌ಪಿನ್‌ಗಳ ಮಾಹಿತಿ ಇದೆ ಮತ್ತು ಅವರ ಮೇಲೆ ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
Related Articles
ಈ ಸಂಬಂಧ ಫೆ.14ರಂದು ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದೇವೆ. ಈ ವೇಳೆ ಪರೀಕ್ಷೆಗೆ ಸಂಬಂಧಿಸಿದ ಸೂಕ್ತ ನಿರ್ದೇಶನಗಳನ್ನು ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ ಅಚ್ಚುಕಟ್ಟಾಗಿ ನಡೆಸುವ ಸಂಬಂಧ ಸಕಲ ಭದ್ರತಾ ಕ್ರಮ ತೆಗೆದುಕೊಂಡಿದ್ದೇವೆ ಎಂದು ಸಚಿವರು ಹೇಳಿದರು. ಪ್ರತಿವರ್ಷ ಪರೀಕ್ಷೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ನಿರ್ವಹಣೆ ಮಾಡಲಾಗುತ್ತಿತ್ತು. ಪ್ರಸಕ್ತ ಸಾಲಿನಿಂದ 32 ಶೈಕ್ಷಣಿಕ ಜಿಲ್ಲೆಗಳಲ್ಲೂ ಈ ವ್ಯವಸ್ಥೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಲಿದ್ದೇವೆ ಎಂದು ಹೇಳಿದರು.
Advertisement
ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಕೆ.ಜಿ. ಜಗದೀಶ್, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ, ಪಿಯು ಇಲಾಖೆ ನಿರ್ದೇಶಕಿ ಕನಕವಲ್ಲಿ ಉಪಸ್ಥಿತರಿದ್ದರು.
ಅಕ್ರಮ ತಡೆಗೆ ನಿಗಾ ಪರೀಕ್ಷಾ ಅಕ್ರಮ ತಡೆ ಯುವ ನಿಟ್ಟಿನಲ್ಲಿ ಸೈಬರ್, ಟ್ಯೂಷನ್ ಕೇಂದ್ರ ಮತ್ತು ಜೆರಾಕ್ಸ್ ಮಳಿಗೆಗಳ ಮೇಲೆ ವಿಶೇಷ ನಿಗಾ ಇರಿಸ ಲಾಗುತ್ತದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷಾ ಭದ್ರತೆ ಸಂಬಂಧಿಸಿದಂತೆ ಶುಕ್ರವಾರ ಸಭೆ ನಡೆಸಿದ ಅವರು, ಈ ಹಿಂದಿನ ಪ್ರಕರಣಗಳನ್ನು ಆಧರಿಸಿ ಈಗಾಗಲೇ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ವದಂತಿ ಹಬ್ಬಿಸುವವರ ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎನ್ನುವುದರ ಬಗ್ಗೆ ಪೊಲೀಸ್ ಇಲಾಖೆಯ ಜತೆ ಚರ್ಚಿಸಿ ತೀರ್ಮಾನ ತೆಗೆದು ಕೊಳ್ಳಲಾಗುತ್ತದೆ ಎಂದರು.ಪರೀಕ್ಷಾ ಕೊಠಡಿಗಳ ಮೇಲ್ವಿಚಾರಕರ ಸಹಿತ ಯಾರೂ ಪರೀಕ್ಷಾ ಕೇಂದ್ರ ವ್ಯಾಪ್ತಿ ಯಲ್ಲಿ ಮೊಬೈಲ್ ಬಳಸುವಂತಿಲ್ಲ ಎಂದರು. 6.80 ಲಕ್ಷ ವಿದ್ಯಾರ್ಥಿಗಳು
ಪ್ರಸಕ್ತ ಸಾಲಿನಲ್ಲಿ 6,80,498 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಎದು ರಿಸ ಲಿದ್ದಾರೆ. ಇದರಲ್ಲಿ 5,61,530 ಹೊಸಬರು, 90,992 ಪುನರಾವರ್ತಿತ ಅಭ್ಯರ್ಥಿ ಗಳು ಮತ್ತು 27,976 ಖಾಸಗಿ ಅಭ್ಯರ್ಥಿಗಳು. ರಾಜ್ಯದ 1,016 ಕೇಂದ್ರಗಳಲ್ಲಿ ಪರೀಕ್ಷೆ ನಡೆಯ ಲಿದೆ. ಪರೀಕ್ಷೆಗೆ ಕಷ್ಟ ಪಟ್ಟು ಓದುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಸರಕಾರದಿಂದ ಕ್ರಮ ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳ ಹಿತ ಕಾಪಾಡಲು ಸರಕಾರ ಬದ್ಧವಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಹಿಂದಿನ ಪ್ರಶ್ನೆ ಪತ್ರಿಕೆಗಳಿಗೆ 2020 ಎಂದು ವರ್ಷ ಬದ ಲಾವಣೆ ಮಾಡಿ ಸಾಮಾ ಜಿಕ ಜಾಲತಾಣ ಮೊದಲಾದ ಕಡೆ ಹರಿಬಿಟ್ಟು, ವಿದ್ಯಾರ್ಥಿ ಗಳಲ್ಲಿ ಭಯ ಹುಟ್ಟಿಸುವವರ ವಿರುದ್ಧ ಕಠಿನ ಕ್ರಮಕ್ಕೆ ಸೈಬರ್ ಪೊಲೀಸ್ ವಿಭಾಗದೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದೇವೆ.
– ಎಸ್. ಸುರೇಶ್ ಕುಮಾರ್
ಪ್ರಾ., ಪ್ರೌಢ ಶಿಕ್ಷಣ ಸಚಿವ