Advertisement

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

10:33 PM Dec 26, 2024 | Team Udayavani |

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಗುರುವಾರ ದಿಲ್ಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

92 ವರ್ಷದ ಮಾಜಿ ಪ್ರಧಾನಿ ಆರೋಗ್ಯ ತೀವ್ರ ಹದಗೆಟ್ಟಿರುವುದರಿಂದ ಅವರನ್ನು ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 2004 ರಿಂದ 2014ರವರೆಗಿನ ಯುಪಿಎ ಮೊದಲ ಹಾಗೂ ಎರಡನೇ ಅವಧಿಯಲ್ಲಿ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.  ಡಾ.ಮನಮೋಹನ್‌ ಸಿಂಗ್‌ 1991ರಿಂದ ರಾಜ್ಯಸಭಾ ಸದಸ್ಯರಾಗಿ ಕಳೆದ ವರ್ಷವಷ್ಟೇ ನಿವೃತ್ತಿಯಾಗಿದ್ದರು.

ಪಿ.ವಿ.ನರಸಿಂಹ ರಾವ್‌ ಪ್ರಧಾನಿಯಾಗಿದ್ದಾಗ 1991ರಲ್ಲಿ ರಾಜ್ಯಸಭಾ ಸದಸ್ಯರಾಗಿ ಹಣಕಾಸು ಸಚಿವರಾಗಿ ರಾಜಕೀಯ ಇನ್ನಿಂಗ್ಸ್‌ ಆರಂಭಿಸಿದರು. ಮೇಲ್ಮನೆಯಲ್ಲಿ ಐದು ಬಾರಿ ಅಸ್ಸಾಂ ಅನ್ನು ಪ್ರತಿನಿಧಿಸಿದರು. 2019ರಲ್ಲಿ ರಾಜಸ್ಥಾನಕ್ಕೆ ಸ್ಥಳಾಂತರಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next