ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಹಲವು ಪ್ರದೇಶಗಳು ಜಲಾವೃತ ವಾಗಿದ್ದ ವೇಳೆ ದೋಸೆ ತಿಂದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ ನೀಡಿದ್ದು, ”ನಾನು ಯಾವುದೋ ಹೋಟೆಲ್ ಉದ್ಘಾಟನೆಗೆ ಹೋಗಿದ್ದನ್ನು ಟ್ರೋಲ್ ಮಾಡಿದ್ದು ಸರಿಯಲ್ಲ” ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಮಾಡಲು ಬೇರೆ ಕೆಲಸ ಇಲ್ಲ.ಅನಾವಶ್ಯಕ ವಿಷಯಗಳನ್ನು ತೆಗೆದುಕೊಡು ಟೀಕೆ ಮಾಡುತ್ತಾರೆ. ನಾನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ. ನನ್ನ ಕ್ಷೇತ್ರದ ಬೊಮ್ಮನಹಳ್ಳಿ ಯಲ್ಲಿ ಎರಡು ಕಡೆ ಮಳೆಯಿಂದ ಸಮಸ್ಯೆ ಆಗಿದ್ದು ಬಿಟ್ಟರೆ ಉಳಿದ ಕಡೆ ಎಲ್ಲಿಯೂ ಕಡೆಯೂ ಆಗಿಲ್ಲ. ಹೀಗಾಗಿ ಮಳೆ ಪ್ರವಾಹ ನಿರ್ವಹಣೆಗೆ ಬೊಮ್ಮಾಯಿ ನೇತೃತ್ವದ ಸರ್ಕಾರ ಬದ್ಧವಾಗಿದೆ.ನಾನು ಕೂಡ ಮಳೆ ಸಂತ್ರಸ್ತರ ನೆರವಿಗೆ ಧಾವಿಸಿದ್ದೇನೆ ಎಂದರು.
ಕಾಂಗ್ರೆಸ್ ನವರು, ಫೇಕ್ ಸುದ್ದಿ ಕ್ರಿಯೇಟ್ ಮಾಡುತ್ತಿದ್ದಾರೆ. ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆ ಆಗಿದೆ. ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ ಎಂದರು.
ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ. ನನ್ನ ಕ್ಷೇತ್ರದಲ್ಲಿ ಇರುವ ಅಂಗಡಿ ಉದ್ಘಾಟನೆ ನನ್ನ ಕರ್ತವ್ಯ ನಿರ್ವಹಣೆ ಮಾಡಿರುವುದು. ನಮ್ಮ ಕ್ಷೇತ್ರದಲ್ಲಿ ಎಲೆಕ್ಟಿಕ್ ಬಸ್ ಉದ್ಘಾಟನೆ ಇತ್ತು ಅಂದರೆ ಅದಕ್ಕೂ ಹೋಗುತ್ತೇವೆ. ದೋಸೆ ಅಂಗಡಿ ಉದ್ಘಾಟನೆ ಗೆ ಕರೆಯುತ್ತಾರೆ ಹೋಗುತ್ತೇವೆ ಎಂದರು.
ಗಣಪತಿ ಇಟ್ಟಿದ್ದರೆ ಅಲ್ಲಿಗೂ ಹೋಗುತ್ತೇವೆ. ಒಬ್ಬ ಜನ ಪ್ರತಿನಿಧಿಯಾಗಿ ನಾನು ಮಾಡುವ ಕೆಲಸ ಮಾಡುತ್ತಿದ್ದೇನೆ. ಕಾಂಗ್ರೆಸ್ ಅವರಿಗೆ ಮಾಡುವುದಕ್ಕೆ ಕೆಲಸ ಇಲ್ಲದೆ ಬೆಂಗಳೂರಿಗೆ ಬದ್ನಾಮ್ ಮಾಡುವ ದೃಷ್ಟಿಯಿಂದ ಇದನ್ನು ಮಾಡುತ್ತಿದ್ದಾರೆ. ಟ್ರೋಲ್ ಗಳಿಗೆ, ಕಾಂಗ್ರೆಸ್ ಪಾರ್ಟಿಗೆ ಉತ್ತರ ಕೊಟ್ಟು ಗೌರವ ಕೊಡುವ ಕೆಲಸ ನಾನು ಮಾಡುವುದಿಲ್ಲ ಎಂದು ತಿರುಗೇಟು ನೀಡಿದರು.