ಗದಗ/ಹುಬ್ಬಳ್ಳಿ: ರಾಜ್ಯದಲ್ಲಿ ಭೀಕರ ಬರ ಇದ್ದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಯಾವೊಬ್ಬ ಸಚಿವರೂ ಸ್ಪಂದಿಸಿಲ್ಲ. ಸರಕಾರ ರಾಜಕೀಯದ ಗೊಂದಲದಲ್ಲಿ ಮುಳುಗಿದೆ. ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವುದೇ ದೊಡ್ಡಸ್ಥಿಕೆ ಎಂದು ತಿಳಿದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಾಪ್ರಹಾರ ನಡೆಸಿದ್ದಾರೆ. ಜೊತೆಗೆ, ಸಮ್ಮಿಶ್ರ ಸರಕಾರ ಬಹಳ ದಿನ ಉಳಿಯದು ಎಂದು ಭವಿಷ್ಯ ನುಡಿದಿದ್ದಾರೆ.
ಗದಗ ಹಾಗೂ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದ ಅವರು, ಅಪ್ಪ-ಮಕ್ಕಳು ಚುನಾವಣೆಯಲ್ಲಿ ಜನರಿಗೆ ಸುಳ್ಳು ಹೇಳುವುದರೊಂದಿಗೆ ವಂಚನೆ ಮಾಡಿ ಅಧಿಕಾರ ಹಿಡಿದಿದ್ದಾರೆ ಎಂದು ದೇವೇಗೌಡ ಹಗೂ ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಿದರು.
ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದ್ದು, ಚುನಾವಣೆಯಲ್ಲಿ ರಾಜ್ಯದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ. ಬಿಜೆಪಿ ದೇಶಾದ್ಯಂತ 300ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ನರೇಂದ್ರ ಮೋದಿ ಮತ್ತೆ ಪ್ರಧಾನಿ ಹುದ್ದೆ ಅಲಂಕರಿಸಲಿರುವುದು ಶತಸಿದ್ಧ ಎಂದು ಪುನರುಚ್ಚರಿಸಿದರು. ಅಲ್ಲದೆ, ಚುನಾವಣೆಯಲ್ಲಿ ಯಾರು ಧೂಳಿಪಟವಾಗ್ತಾರೆ ಎಂಬುದನ್ನು ಕಾಯ್ದು ನೋಡಿ. ಲೋಕಸಭಾ ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ
ಎಂದು ಭವಿಷ್ಯ ನುಡಿದರು.