ವಿಜಯಪುರ: ಬೃಹತ್ ಮೊಸಳೆಯೊಂದು ಪಟ್ಟಣದಲ್ಲಿ ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯತ್ ಎದುರಿನ ಖಾಲಿ ಜಾಗದಲ್ಲಿರುವ ಬಾವಿಯಲ್ಲಿ ಪತ್ತೆ ಆಗಿದೆ.
ಬಾವಿಯೊಂದರಲ್ಲಿ ಬೃಹತ್ ಆಕಾರದ ಮೊಸಳೆ ಹಲವಾರು ದಿನಗಳಿಂದ ವಾಸಿಸುತ್ತಿದೆ. ಅಲ್ಲದೇ, ಈ ಬಗ್ಗೆ ಹಲವು ಬಾರಿ ಅರಣ್ಯ ಇಲಾಖೆಯವರಿಗೆ ಹೇಳಿದರೂ ಏನೂ ಪ್ರಯೋಜನ ಆಗಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರಿಗೆ ಸಮಸ್ಯೆ ಆಗುವ ಮುನ್ನವೇ ಮೊಸಳೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ನಾಲತವಾಡ ಪ.ಪಂ. ಮುಖ್ಯಾಧಿಕಾರಿ ಎಸ್.ಎಸ್. ಬಾಗಲಕೋಟೆ ಕೂಡಲೇ ಸಳಕ್ಕೆ ಬಂದು, ನೋಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಶೀಘ್ರ ಅದನ್ನು ಬೇರೆಡೆ ಕೊಂಡು ಬಿಡುವಂತೆ ತಿಳಿಸಲಾಗುವುದು ಎಂದರು.
ಈ ಸಂದರ್ಭ ಸಂಗಣ್ಣ ಹಾವರಿಗಿ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿ ಇದ್ದರು.
Related Articles