Advertisement
ಜುಲೈನಿಂದ ಈವರೆಗೆ ಸುರಿದ ಮಳೆಯಿಂದ ಆದ ಬೆಳೆಹಾನಿಗೆ 2435.57 ಕೋಟಿ ಹಣವನ್ನು ರೈತರಿಗೆ ನೀಡಿದ್ದೇವೆ. ಮಳೆಯಾಶ್ರಿತ ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಇದ್ದ 6800 ರೂಪಾಯಿಯನ್ನು ಪ್ರತಿ ಹೆಕ್ಟೇರ್‌ಗೆ 13600 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ನೀರಾವರಿ ಜಮೀನಿಗೆ 13,500 ರೂ.ಗಳಿಂದ 25 ರೂ.ಗಳಿಗೆ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ ನೀಡುವ 18 ಸಾವಿರ ರೂ. ಪರಿಹಾರವನ್ನು 28 ಸಾವಿರ ರೂ ಗಳಿಗೆ ಹೆಚ್ಚಿಸಲಾಗಿದೆ.
Related Articles
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,123 ಎಕ್ರೆ ಹಾಗೂ ಉಡುಪಿ ಜಿಲ್ಲೆಯಲ್ಲಿ 1,181 ಎಕ್ರೆ ಸರಕಾರಿ ಭೂಮಿಯನ್ನು ಸಾರ್ವಜನಿಕ ಉದ್ದೇಶಗಳಿಗೆ ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
Advertisement
ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಉದ್ದೇಶಗಳಾದ ಮನೆ, ನಿವೇಶನ, ಸಾರ್ವಜನಿಕ ಕಟ್ಟಡ, ಘನ/ದ್ರವ ತ್ಯಾಜ್ಯ ನಿರ್ವಹಣೆ, ಶ್ಮಶಾನ ಇತ್ಯಾದಿಗಳಿಗೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಭೂಮಿ ಮಂಜೂರು ಮಾಡುವ ಎಷ್ಟು ಪ್ರಸ್ತಾವನೆಗಳು ಕಂದಾಯ ಇಲಾಖೆ ಮುಂದಿವೆ ಎಂದು ಪ್ರಶ್ನಿಸಿದರು.
ಅದಕ್ಕೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,123 ಎಕ್ರೆ ಹಾಗೂ ಉಡುಪಿ ಜಿಲ್ಲೆಯಲ್ಲಿ 1,181 ಎಕ್ರೆ ಸರಕಾರಿ ಭೂಮಿಯನ್ನು ಸಾರ್ವಜನಿಕ ಉದ್ದೇಶಗಳಿಗೆ ಮಂಜೂರು ಮಾಡಲಾಗಿದೆ. ಜತೆಗೆ ಘನತ್ಯಾಜ್ಯ ಉದ್ದೇಶಕ್ಕೆ ಜಮೀನು ಕಾದಿರಿಸುವ 11 ಪ್ರಕರಣ ಉಡುಪಿಯಲ್ಲಿ ಹಾಗೂ 15 ಪ್ರಕರಣಗಳು ದಕ್ಷಿಣ ಕನ್ನಡದಲ್ಲಿ ಬಾಕಿ ಇವೆ. ಅದೇ ರೀತಿ ಮನೆ ನಿವೇಶನಕ್ಕೆ ಕ್ರಮವಾಗಿ 18 ಮತ್ತು 52, ಸಾರ್ವಜನಿಕ ಕಟ್ಟಡಕ್ಕೆ ಕ್ರಮವಾಗಿ 15 ಮತ್ತು 4 ಪ್ರಕರಣಗಳು ಬಾಕಿ ಇವೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 44 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 71 ಪ್ರಕರಣಗಳು ಬಾಕಿ ಇವೆ ಎಂದು ತಿಳಿಸಿದರು.
ಸಾರ್ವಜನಿಕ ಉದ್ದೇಶಗಳಿಗೆ ಜಮೀನು ಕಾದಿರಿಸುವ ವಿಚಾರದಲ್ಲಿ ಎರಡೂ ಜಿಲ್ಲೆಗಳಲ್ಲಿ ಯಾವುದೇ ವಿಳಂಬವಾಗುತ್ತಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.