Advertisement

ತೊಗರಿ ಬೆಳೆ ವಿಮೆ ನೋಂದಣಿಗೆ 31 ಕೊನೆ ದಿನ

09:34 AM Jul 11, 2020 | Suhan S |

ಚಿಂಚೋಳಿ: 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ(ವಿಮಾ)ಯೋಜನೆಯಡಿ ತೊಗರಿ ಬೆಳೆಗೆ ರೈತರು ವಿಮಾ ನೋಂದಣಿ ಮಾಡಿಸಲು ಜುಲೈ 31 ಕೊನೆ ದಿನವಾಗಿದೆ ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಅನೀಲಕುಮಾರ ರಾಠೊಡ ತಿಳಿಸಿದ್ದಾರೆ.

Advertisement

ವಿಮಾ ಯೋಜನೆ ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸೆಲ್‌ ಸೋಂಪೋ ಜನರಲ್‌ ಇನ್ಸುರೆನ್ಸ್‌ ಕಂಪನಿ ನಿಗದಿಪಡಿಸಲಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಅಲಿಕಲ್ಲಿನ ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ, ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡ ಸಂದರ್ಭದಲ್ಲಿ ಬೆಳೆನಷ್ಟ ಉಂಟಾದರೆ ವಿಮೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಗಳಾದ ಚಿಂಚೋಳಿ,ನಿಡಗುಂದಾ, ಸುಲೇಪೇಟ, ಕೋಡ್ಲಿ, ಚಿಮ್ಮನಚೋಡ, ಕುಂಚಾವರಂ, ಐನಾಪುರ ಅಥವಾ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆಗೆ ಭೇಟಿ ನೀಡಬಹುದು.ನೋಂದಣಿಗಾಗಿ ಹತ್ತಿರದ ಬ್ಯಾಂಕ್‌ ಅಥವಾ ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next