Advertisement
ಅಡಕೆ, ಶುಂಠಿ ಹಾಗೂ ಕಾಳುಮೆಣಸು ಮುಂತಾದ ತೋಟಗಾರಿಕಾ ಬೆಳೆಗಳಿಗೆ ಹವಾಮಾನ ಆಧಾರಿತ ವಿಮೆ ಮಾಡಿಸಲು ಜೂನ್ 30ರ ವರೆಗೆ ಹಾಗೂ ಮಾವು ಬೆಳೆಗೆ ಜುಲೈ 31ರವರೆಗೆ ನೋಂದಾಯಿಸಿಕೊಳ್ಳಲು ದಿನಾಂಕನಿಗ ಪಡಿಸಿ ಸರ್ಕಾರ ಜೂನ್ 25ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ, ಅವಧಿ ವಿಸ್ತರಿಸಬೇಕೆಂಬ ಸಂಸದರ ಕೋರಿಕೆಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪರಿಷ್ಕೃತ ಆದೇಶ ಶೀಘ್ರದಲ್ಲಿ ಹೊರಬೀಳಲಿದೆ ಎಂದು ತಿಳಿಸಿದ್ದಾರೆ. ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ಎರಡು ದಿನಗಳ ಅತ್ಯಂತ ಕಡಿಮೆ ಕಾಲಾವಾಕಾಶವಿದೆ. ಆದ್ದರಿಂದ, ಮಾವು ಸೇರಿದಂತೆ ಎಲ್ಲಾ ತೋಟಗಾರಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗದೆ ನಿಗ ಪಡಿಸಲಾಗುವ ದಿನಾಂಕದೊಳಗಾಗಿ ಬೆಳೆ ವಿಮಾ ಕಂತು ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಅರ್ಹ ರೈತರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. Advertisement
ಬೆಳೆ ವಿಮೆಗೆ ಹೆಸರು ನೋಂದಣಿ ಅವಧಿ ವಿಸ್ತರಣೆ: ರಾಘವೇಂದ್ರ
10:14 AM Jun 29, 2020 | Suhan S |
Advertisement
Udayavani is now on Telegram. Click here to join our channel and stay updated with the latest news.