Advertisement

ಗ್ರಾಮ ಒನ್‌ ಕೇಂದ್ರಗಳಲ್ಲಿ ಬೆಳೆ ವಿಮೆ ನೋಂದಣಿ

04:53 PM Jul 08, 2022 | Team Udayavani |

ದೇವನಹಳ್ಳಿ: ಗ್ರಾಮ ಒನ್‌ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಯಡಿ ರೈತರು ಬೆಳೆ ವಿಮೆಯನ್ನು ನೋಂದಾಯಿಸಿ ಕೊಳ್ಳಹುದಾಗಿದೆ ಎಂದು ಬೆಂ.ಗ್ರಾ. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ರೇವಣಪ್ಪ ತಿಳಿಸಿದರು.

Advertisement

ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಗ್ರಾಮ ಒನ್‌ ಸೇವಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಹತ್ತಿರದ ಬ್ಯಾಂಕುಗಳಲ್ಲಿ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಮಾತ್ರ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ
ಮಾಡಿಕೊಳ್ಳಬಹುದಾಗಿತ್ತು. ಪ್ರಸಕ್ತ ವರ್ಷದಿಂದ ಜಿಲ್ಲೆಯ ಎಲ್ಲಾ ಗ್ರಾಮ ಒನ್‌ ಕೇಂದ್ರಗಳಲ್ಲೂ ಬೆಳೆ ವಿಮೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಜಿಲ್ಲೆಯ 99 ಗ್ರಾಮ ಒನ್‌ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಬೆಳೆ ವಿಮೆ ಯೋಜನೆಯ ಮಾಹಿತಿ ನೀಡಲು ಹಾಗೂ ವಿಮೆ ನೋಂದಣಿ ಮಾಡಿಕೊಳ್ಳುವ ಕ್ರಮಗಳ ಕುರಿತು ತರಬೇತಿ ಆಯೋಜಿಸಲಾಗಿದೆ ಎಂದರು.

ಯೋಜನೆಯ ಲಾಭ ಪಡೆಯಿರಿ: ಗ್ರಾಮ ಒನ್‌ ಸಿಬ್ಬಂದಿ ತರಬೇತಿ ಪಡೆಯುವ ಮೂಲಕ ಬೆಳೆ ವಿಮೆ ಯೋಜನೆ ಕುರಿತು ರೈತರಲ್ಲಿ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಉತ್ತೇಜಿಸಬೇಕು.

2022-23 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯ 10 ಬೆಳೆ ಗುರುತಿಸಲಾಗಿದ್ದು, ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮಾ ನೋಂದಣಿ ಮಾಡಿಕೊಳ್ಳುವ ಮೂಲಕ ಯೋಜನೆಯ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ರವಿಕುಮಾರ್‌, ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ್‌, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ಹಾಗೂ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next