Advertisement

ರೈತರಿಗೆ ಅನ್ಯಾಯವಾಗದಂತೆ ಬೆಳೆ ವಿಮೆ ಸಮೀಕ್ಷೆ

10:10 AM Aug 03, 2019 | Sriram |

ಬೆಂಗಳೂರು: ಬೆಳೆವಿಮೆ ವಿಚಾರದಲ್ಲಿ ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಬೆಳೆ ವಿಮೆ ಸಮೀಕ್ಷೆ ಮಾಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಗುರುವಾರ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳೆವಿಮೆ ಬಗ್ಗೆ ಗೊಂದಲ ಇದ್ದ ಕಾರಣ ಗ್ರಾಮೀಣ ಭಾಗದ ಯುವಕರಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಇದರಿಂದ ಯಾರ್ಯಾರು, ಯಾವ ಬೆಳೆ, ಎಷ್ಟು ವಿಸ್ತೀರ್ಣದಲ್ಲಿ ಹಾಕಿದ್ದಾರೆ. ಎಷ್ಟು ವಿಮೆ ಅನ್ವಯವಾಗಲಿದೆ ಎಂಬುದರ ಸ್ಪಷ್ಟತೆ ಸಿಗಲಿದೆ. ಇದರಿಂದ ಬೆಳೆನಷ್ಟಕ್ಕೆ ಪರಿಹಾರ ಕೊಡಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಡಿ ಅನುಕೂಲವಾಗಲಿದೆ. ರೈತರ ಸಂಕಷ್ಟವೂ ಪರಿಹಾರವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಇಂದಿನ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಅಭಿವೃದ್ಧಿ ಕಾರ್ಯಗಳಿಗೆ ಯಾವ ರೀತಿ ಹಣ ವಿನಿಯೋಗ ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಋಣಮುಕ್ತ ಪರಿಹಾರ ಕಾಯ್ದೆಗೆ ರಾಷ್ಟ್ರಪತಿಯವರು ಅಂಕಿತ ಹಾಕಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಇದೀಗ ನಿಯಮಾವಳಿ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆ ಕಾಯ್ದೆಯಿಂದ ಯಾರೆಲ್ಲರಿಗೆ ಅನುಕೂಲವಾಗಲಿದೆ ಎಂಬ ಬಗ್ಗೆ ಮಾಹಿತಿ ನೀಡಲು ತಿಳಿಸಲಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ 3 ವರ್ಷದಲ್ಲಿ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವುದು ನಮ್ಮ ಉದ್ದೇಶ. ಆ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿದ್ದೇನೆ. ವಸತಿ ಇಲಾಖೆ ಜತೆ ಇನ್ನೊಮ್ಮೆ ಪ್ರತ್ಯೇಕ ಸಭೆ ನಡೆಸುತ್ತೇನೆ. ಮುಖ್ಯಮಂತ್ರಿಯವರ ಬಹುಮಹಡಿ ವಸತಿ ಯೋಜನೆಯಡಿ ಬೆಂಗಳೂರಿನಲ್ಲಿ ಒಂದು ಲಕ್ಷ ಮನೆಯ ಜತೆಗೆ ಇನ್ನೊಂದು ಲಕ್ಷ ಮನೆ ನಿರ್ಮಾಣದ ಬಗ್ಗೆಯೂ ಚಿಂತನೆಯಿದೆ. ಈಗಾಗಲೇ ಹತ್ತು ಕಡೆ ಜಮೀನು ಗುರುತಿಸಲಾಗಿದ್ದು, ನಾನೇ ಖುದ್ದಾಗಿ ಸ್ಥಳ ವೀಕ್ಷಣೆ ಮಾಡಲಿದ್ದೇನೆ ಎಂದು ತಿಳಿಸಿದರು.

Advertisement

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಆರ್ಥಿಕ ಇಲಾಖೆ ಆಪರ ಮುಖ್ಯ ಕಾರ್ಯದರ್ಶಿ ಐಎಸ್‌ಎನ್‌ ಪ್ರಸಾದ್‌, ಮುಖ್ಯಮಂತ್ರಿಯವರ ಸಲಹೆಗಾರ ಎಂ.ಲಕ್ಷ್ಮಿನಾರಾಯಣ, ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ಸಭೆಯಲ್ಲಿ ಉಪಸ್ಥಿತರಿದ್ದರು.

ಸಿಎಂ ಹೈದರಾಬಾದ್‌ ಪ್ರವಾಸ
ಬೆಂಗಳೂರು:
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ಹೈದರಾಬಾದ್‌ನ ಭದ್ರಾಚಲಂ ರಾಮಚಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮೊದಲು ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ಯಡಿಯೂರಪ್ಪ ಅವರು, ಇಷ್ಟಾರ್ಥ ಸಿದ್ಧಿಗಾಗಿ ಶುಕ್ರವಾರ ಭದ್ರಾಚಲಂ ರಾಮಚಂದ್ರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ನಂತರ ಚಿನ್ನ ಜೀಯರ್‌ ಸ್ವಾಮೀಜಿಯವರನ್ನು ಭೇಟಿ ಮಾಡಿ ಕೆಲ ವಿಷಯಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ತೆಲಂಗಾಣ ಸಿಎಂ ಕೆ.ಚಂದ್ರಶೇಖರ್‌ ರಾವ್‌ ಅವರು 1048 ಯಜ್ಞಕುಂಡ ಒಳಗೊಂಡ ಮಹಾಸುದರ್ಶನ ಯಾಗ ನಡೆ ಸಲು ಸಿದ್ಧತೆ ಮಾಡಿಕೊಂಡಿದ್ದು, ಚಿನ್ನ ಜೀಯರ್‌ ಸ್ವಾಮೀಜಿ ಯನ್ನು ಭೇಟಿ ಮಾಡಿದ್ದರು.

ಈ ಬೆನ್ನಲ್ಲೇ ಯಡಿಯೂರಪ್ಪ ಅವರು ಹೈದರಾಬಾದ್‌ ಪ್ರವಾಸ ಆರಂಭಿಸಿದ್ದಾರೆ. ದೇವಸ್ಥಾನ ದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಚಿನ್ನ ಜೀಯರ್‌ ಅವರೊಂ ದಿಗೆ ಕೆಲಕಾಲ ಮಾತುಕತೆ ನಡೆಸಿದ ನಂತರವೇ ಬೆಂಗಳೂರಿಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ

Advertisement

Udayavani is now on Telegram. Click here to join our channel and stay updated with the latest news.

Next