Advertisement

ಅಧಿಕಾರಿಗಳಿಂದ ಬೆಳೆ ಸಮೀಕ್ಷೆ

03:49 PM Sep 18, 2020 | Suhan S |

ಮಂಡ್ಯ: ತಾಲೂಕಿನ ಮಾರಗೌಡನಹಳ್ಳಿ ಗ್ರಾಮದ ರೈತ ಜಿ.ಮುದ್ದಯ್ಯ ಅವರ ಜಮೀನಿನಲ್ಲಿ ಅಧಿಕಾರಿಗಳು ಬೆಳೆ ಸಮೀಕ್ಷೆ ನಡೆಸಿದರು.

Advertisement

ತಹಶೀಲ್ದಾರ್‌ ಚಂದ್ರಶೇಖರ್‌ ಎಂ.ಗಾಳಿ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ಬೆಳೆ ಸಮೀಕ್ಷೆ ಕಂದಾಯ, ಕೃಷಿ, ರೇಷ್ಮೆ, ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಸಮೀಕ್ಷೆ ನಡೆಯುತ್ತಿದೆ. ರೈತರು ಸರಿಯಾಗಿ ಮಾಹಿತಿ ನೀಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

ನಷ್ಟ ತುಂಬಲು ಸಹಕಾರಿ: ಬೆಳೆ ಸಮೀಕ್ಷೆಯಿಂದ ನಿಖರ ಮಾಹಿತಿ ಒದಗಿಸಿದರೆ, ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನಷ್ಟ ತುಂಬಿಕೊಡಲು ಸಹಕಾರಿಯಾಗಲಿದೆ. ಕನಿಷ್ಠ ಬೆಂಬಲ ಯೋಜನೆಯಡಿ ಅರ್ಹರನ್ನು ಗುರುತಿಸಲು, ಬೆಂಬಲ ಬೆಲೆ ಯೋಜನೆಯಡಿ ಸಹಾಯಧನ ನೀಡಲು, ಬೆಳೆ ಎಷ್ಟು ವಿಸ್ತೀರ್ಣದಲ್ಲಿ ಬೆಳೆಯಲಾಗಿದೆ ಎಂಬುದನ್ನು ತಿಳಿಯಲು ಸಹಕಾರಿಯಗಿದೆ ಎಂದರು.

ಸಮೀಕ್ಷೆಯಲ್ಲಿ ರಾಜ್ಯ 2ನೇ ಸ್ಥಾನ: ಕೃಷಿ, ತೋಟಗಾರಿಕೆ ಫ‌ಲಾನುಭವಿಗಳಿಗಳ ಬೆಳೆ ಸಾಲ ನೀಡಲು ಪರಿಶೀಲನೆ ಮಾಡಲು ಅನುಕೂಲವಾಗಲಿದೆ. ಬೆಳೆ ಸಮೀಕ್ಷೆಯಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ. ಮಂಡ್ಯ ತಾಲೂಕು ಸಹ 2ನೇ ಸ್ಥಾನದಲ್ಲಿದೆ. ಪ್ರತಿಯೊಬ್ಬರೂ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ದಾಖಲು ಮಾಡಬೇಕು ಎಂದು ಹೇಳಿದರು. 2020ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆಗೆ ಕಂದಾಯ, ಕೃಷಿ, ರೇಷ್ಮೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ರೈತರಿಗೆ ಅಗತ್ಯ ಮಾಹಿತಿ ನೀಡಿ, ಪ್ರತಿ ಹಳ್ಳಿಗೂ ಭೇಟಿ ನೀಡಿ ಬೆಳೆ ಸಮೀಕ್ಷೆ ಯಶಸ್ವಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next