Advertisement
ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆಯ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದ್ದು, ಸಂಗ್ರಹವಾದ ಬೆಳೆಗಳಮಾಹಿತಿಯನ್ನು ತಾಲೂಕ ಆಡಳಿತ ಪರಿಶೀಲಿಸಲಿದೆ. ರೈತರು ಸ್ಮಾರ್ಟ್ ಫೋನ್‌ಉಪಯೂಗಿಸಿ ಬೆಳೆ ಸಮೀಕ್ಷೆ ಮೊಬೆ„ಲ್‌ಆ್ಯಪ್‌ನ್ನು ಗೂಗಲ್‌ನ ಪ್ಲೇ ಸ್ಟೋರ್ ನಿಂದಡೌನಲೋಡ್ ಮಾಡಿಕೊಳ್ಳಬಹುದಾಗಿದೆಅಥವಾ ರೈತರ ಪರವಾಗಿ ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಅಥವಾ ಮೊಬೆ„ಲ್ ಮಾಹಿತಿ ಹೊಂದಿರುವ ಕಂದಾಯ/ಕೃಷಿ ಇಲಾಖೆ ವತಿಯಿಂದ ನಿಯೋಜನೆಗೊಂಡ ತಮ್ಮದೆ ಗ್ರಾಮದ ಮಾಹಿತಿ ತಂತ್ರಜ್ಞಾನದ ಬಗ್ಗೆ ತಿಳಿವಳಿಕೆ ಇರುವ ಯುವಕರ (ಖಾಸಗಿ ನಿವಾಸಿ/ಪಿ.ಆರ್) ಸಹಾಯದೂಂದಿಗೆ ರೈತರು ತಮ್ಮ ಮೊಬೆ„ಲ್ ಸಂಖ್ಯೆಗೆ ಒಟಿಪಿ ಪಡೆಯುವ ಮೂಲಕ ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವುಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆಮೊಬೆ„ಲ್ ಆ್ಯಪ್ ಮೂಲಕ ಅಪ್‌ಲೋಡ್ ಮಾಡಬಹುದಾಗಿದೆ. ರೈತರುನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡದೇ ಇದ್ದರೆ ಪ್ರತಿ ಗ್ರಾಮಕ್ಕೆನಿಯೋಜನೆಗೊಂಡ ಬೆಳೆ ಸಮೀಕ್ಷಕರು(ಖಾಸಗಿ ನಿವಾಸಿ/ಪಿ.ಆರ್) ತಮ್ಮ ಹೊಲಗಳಿಗೆ ಭೇಟಿ ನೀಡಿ ಮೊಬೆ„ಲ್‌ಆ್ಯಪ್ ಬಳಸಿ ಬೆಳೆ ಮಾಹಿತಿ ಸಂಗ್ರಹಿಸಿ ಅಪಲೋಡ್ ಮಾಡುತ್ತಾರೆ.
Advertisement
ಮೊಬೈಲ್ ಆ್ಯಪ್‌ದಿಂದ ಬೆಳೆ ಸಮೀಕ್ಷೆ
03:38 PM Dec 18, 2020 | Suhan S |
Advertisement
Udayavani is now on Telegram. Click here to join our channel and stay updated with the latest news.