Advertisement
ಸತತ ಒಂದು ತಿಂಗಳು ಕಾಲ ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಮೈಸೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರು ಬೆಳೆದಿದ್ದ ಬೆಳೆ ಹೊಲದಲ್ಲೇ ಕೊಳೆತು ಹೋಗಿದ್ದು, ರೈತರು ನಷ್ಟ ಅನುಭವಿಸಿದಂತಾಗಿದೆ.
Related Articles
Advertisement
ಇಕ್ಕಟ್ಟಿನ ಸ್ಥಿತಿಯಲ್ಲಿ ರೈತ: ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಕಡೆ ಭತ್ತ, ರಾಗಿ ಕಟಾವಿಗೆ ಬಂದಿದೆ. ಆದರೆ ಕಳೆದೊಂದು ವಾರದಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಮಳೆ ಬೀಳುವ ಆತಂಕದಲ್ಲಿರುವ ರೈತರು ಕೈಗೆ ಬಂದಿರುವ ಬೆಳೆಯನ್ನು ಮನೆಗೆ ಕೊಂಡೊಯ್ಯಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಪರಿಣಾಮ ಶೇ.90 ರಷ್ಟು ರೈತರ ಭತ್ತ ಮತ್ತು ರಾಗಿ ಗದ್ದೆ-ಹೊಲದಲ್ಲೇ ಮೊಳಕೆಯೊಡೆಯುತ್ತಿದ್ದು, ಇದರಿಂದ ಅನ್ನದಾತ ಕಂಗಾಲಾಗಿ¨ªಾನೆ. ಈಗಾಗಲೇ ರೈತರು ಉಳುಮೆ, ನಾಟಿ, ರಸಗೊಬ್ಬರ, ಕ್ರಿಮಿನಾಶಕ, ಕೂಲಿಯಾಳಿಗೆ ಮಾಡಿದ್ದ ಖರ್ಚು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ರೈತರ ಖಾತೆಗೆ ಶೀಘ್ರ ಬೆಳೆ ಪರಿಹಾರ ಹಣ ಜಮೆ
ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಶೀಘ್ರವೇ ರೈತರ ಖಾತೆಗೆ ಬೆಳೆ ಪರಿಹಾರ ಹಣವನ್ನು ಸರ್ಕಾರ ಬಿಡುಗಡೆ ಮಾಡಲಿದೆ.
ಜಿಲ್ಲೆಯಲ್ಲಿ 945.7 ಹೆಕ್ಟೇರ್ ಮಳೆಯಾಶ್ರಿತ ಮತ್ತು ನಿರಾವರಿ ಭೂಮಿಯಲ್ಲಿ ಬೆಳೆದಿದ್ದ ಫಸಲು ನಾಶವಾಗಿದ್ದು, ಮಳೆಯಾಶ್ರಿತ ಪ್ರತಿ ಹೆಕ್ಟೇರ್ ಗೆ 6800 ರೂ., ನೀರಾವರಿಯಾಶ್ರಿತ ಪ್ರತಿ ಹೆಕ್ಟೇರ್‌ಗೆ 13,500 ರೂ. ಪರಿಹಾರ ನೀಡಲಾಗುವುದು ಎಂದು ಕೃಷಿ ಇಲಾಖೆ ಉಪನಿರ್ದೇಶಕ ಮಹಂತೇಶಪ್ಪ ತಿಳಿಸಿದರು.
ಅಕ್ಟೋಬರ್-ನವೆಂಬರ್‌ನಲ್ಲಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ 375 ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ನಾಶವಾಗಿರುವುದನ್ನು ಸರ್ವೆ ಮಾಡಲಾಗಿದೆ. ಸರ್ಕಾರದ ಆದೇಶದಂತೆ ಪ್ರತಿ ಹೆಕ್ಟೇರ್‌ಗೆ 18 ಸಾವಿರ ರೂ. ಬೆಳೆ ಪರಿಹಾರ ವಿತರಿಸಲಾಗುವುದು. ● ರುದ್ರೇಶ್, ಉಪನಿರ್ದೇಶಕ ತೋಟಗಾರಿಕೆ ಇಲಾಖೆ, ಮೈಸೂರು.
– ಸತೀಶ್ ದೇಪುರ