Advertisement
ಮಂಗಳೂರಿನಿಂದ ಕಾಸರಗೋಡಿಗೆ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ತಲಪಾಡಿಯಲ್ಲಿರುವ ಟೋಲ್ ಗೇಟ್ ಕಳೆದು ಕೇರಳಕ್ಕೆ ಪ್ರವೇಶಿಸುತ್ತಿದ್ದಂತೆ ಕೇರಳದ ರಸ್ತೆಯ ಪರಿಸ್ಥಿತಿ ಹೇಗಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಸಿಗುತ್ತದೆ. ಕೇರಳದ ಪ್ರದೇಶದಲ್ಲಿ ತಲಪಾಡಿ ಬಸ್ ತಂಗುದಾಣದಿಂದ ಕೆಲವೇ ಅಂತರದಲ್ಲಿ ಮುಂದೆ ಸಾಗಿದರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೃಷ್ಟಿಯಾಗಿರುವ ಬೃಹತ್ ಹೊಂಡ ಪ್ರಯಾಣಿಕರನ್ನು, ವಾಹನಗಳನ್ನು ಸ್ವಾಗತಿಸುತ್ತವೆ. ತಲಪಾಡಿ ಪ್ರವೇಶಿಸುವಾಗಲೇ ಕರ್ನಾಟಕ ಮತ್ತು ಕೇರಳದ ರಾಷ್ಟ್ರೀಯ ಹೆದ್ದಾರಿಯ ಬಗ್ಗೆ ಇರುವ ಗುಣಮಟ್ಟದ ಅಂತರವನ್ನು ಸೂಚಿಸುತ್ತದೆ. ತಲಪಾಡಿಯಿಂದ ಮಂಗಳೂರಿನ ವರೆಗೆ ಚತುಷ್ಪಥ ರಸ್ತೆ ಪೂರ್ಣಗೊಂಡು ವರ್ಷಗಳೇ ಸಂದರೂ, ಕೇರಳದ ತಲಪಾಡಿಯ ದಕ್ಷಿಣಕ್ಕೆ ರಾ. ಹೆದ್ದಾರಿಯ ಪರಿಸ್ಥಿತಿ ತೀರಾ ಕೆಟ್ಟದಾಗಿದೆ. ಅಗಲ ಕಿರಿದಾದ ರಸ್ತೆ. ಜತೆಯಲ್ಲಿ ರಸ್ತೆಯ ಅಲ್ಲಲ್ಲಿ ಹೊಂಡಗುಂಡಿಗಳು ಎದುರಾಗುತ್ತವೆ. ತಲಪಾಡಿಯಲ್ಲಂತೂ ಬೃಹತ್ ಗಾತ್ರದ ಹೊಂಡ ಬಿದ್ದು ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
Related Articles
Advertisement
ದುರಸ್ತಿ ಎಂದು?ರಸ್ತೆಯಲ್ಲೇ ನಿರ್ಮಾಣವಾಗಿರುವ ಬೃಹತ್ ಹೊಂಡದಿಂದಾಗಿ ಪದೇ ಪದೇ ವಾಹನ ಅಪ ಘಾತ ಸಂಭವಿಸುತ್ತಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಸುಗಮವಾಗಿ ವಾಹನ ಸಾಗಲು ಸಾಧ್ಯವಾಗದೆ ರಸ್ತೆ ತಡೆ, ವಾಹನ ದಟ್ಟಣೆಗೂ ಕಾರಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳು ಅಡ್ಡಾ ದಿಡ್ಡಿಯಾಗಿ ನಿಂತಿರುವ ವಾಹನಗಳ ಮಧ್ಯೆ ನುಸುಳಿ ಸಾಗುತ್ತಿವೆ. ಇದೂ ಅಪಘಾತಕ್ಕೆ ಪ್ರಮುಖ ಕಾರಣವಾಗುತ್ತಿದೆ. ರಸ್ತೆಯ ಡಾಮರು ಕಿತ್ತುಹೋಗಿ ಜಲ್ಲಿ ಮೇಲೆದ್ದು, ಬೃಹತ್ ಗಾತ್ರದ ಹೊಂಡ ಸೃಷ್ಟಿಯಾಗಿದೆ. ಹೊಂಡದಿಂದಾಗಿ ವಾಹನ ಸಾಗುವಾಗ ಜಲ್ಲಿ ಸಿಡಿದು ರಸ್ತೆ ಬದಿ ತೆರಳುವ ಪಾದಚಾರಿ ಗಳಿಗೂ ಬಡಿದು ಹಲವಾರು ಮಂದಿ ಗಾಯ ಗೊಂಡಿದ್ದಾರೆ. ದಿನದಿಂದ ದಿನಕ್ಕೆ ಈ ಹೊಂಡ ತನ್ನ ಗಾತ್ರವನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಇನ್ನಷ್ಟು ಅಪಾಯಕಾರಿಯಾಗಿ ಮುನ್ನುಗುತ್ತಿದೆ. ಜನ ದಟ್ಟಣೆಯ ಪ್ರದೇಶವಾಗಿರುವ ಹೆದ್ದಾರಿಯ ಪರಿಸ್ಥಿತಿಯೇ ಹೀಗಾದರೆ ಇನ್ನಿತರ ರಸ್ತೆಗಳ ಸ್ಥಿತಿ ಹೇಗಿರಬೇಕು ಎಂಬುದು ಊಹಿಸುವುದೂ ಕಷ್ಟ.
ಚಿತ್ರ: ಶ್ರೀಕಾಂತ್ ಕಾಸರಗೋಡು