Advertisement

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಸಿಆರ್ ಪಿಎಫ್ ಯೋಧ: ನಾಲ್ವರು ಸಾವು, ಮೂವರಿಗೆ ಗಾಯ

08:49 AM Nov 08, 2021 | Team Udayavani |

ಸುಕ್ಮಾ: ಸಿಆರ್ ಪಿಎಫ್ ಜವಾನರೊಬ್ಬರು ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ನಾಲ್ವರು ಸಾವನ್ನಪ್ಪಿ, ಮೂರು ಮಂದಿ ಗಾಯಗೊಂಡ ಘಟನೆ ಸೋಮವಾರ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಅರೆಸೇನಾ ಪಡೆಯ ಶಿಬಿರದಲ್ಲಿ ನಡೆದಿದೆ.

Advertisement

ರಾಜ್ಯದ ರಾಜಧಾನಿ ರಾಯಪುರದಿಂದ ಸುಮಾರು 400 ಕಿಮೀ ದೂರದಲ್ಲಿರುವ ಜಿಲ್ಲೆಯ ಲಿಂಗಂಪಲ್ಲಿ ಗ್ರಾಮದ ಸಿಆರ್‌ಪಿಎಫ್‌ನ 50ನೇ ಬೆಟಾಲಿಯನ್‌ನ ಶಿಬಿರದಲ್ಲಿ ಮುಂಜಾನೆ 3.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಒಬ್ಬ ಯೋಧ ತನ್ನ ಎಕೆ-47 ರೈಫಲ್‌ ನಿಂದ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮವಿಭೂಷಣ,ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಇಂದು ಪ್ರದಾನ

ಕೂಡಲೇ ಜವಾನನನ್ನು ಬಂಧಿಸಲಾಗಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Advertisement

ಗಾಯಗೊಂಡ ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next