Advertisement

CRPF; ರಾಂಬನ್‌ನಲ್ಲಿ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

06:51 PM Sep 03, 2023 | Team Udayavani |

ರಾಂಬನ್‌ : ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF ) ಯೋಧ ತನ್ನ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

Advertisement

ಬಿಹಾರದ ನಿವಾಸಿ ಬಶಿತ್ ನಾರಾಯಣ ಯಾದವ್ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಬನಿಹಾಲ್-ಖಾಜಿಗುಂಡ್ ಸುರಂಗದ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಶನಿವಾರ ರಾತ್ರಿ 11.45 ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಆತ್ಮಹತ್ಯೆ ಹಿಂದಿನ ಉದ್ದೇಶವು ತತ್ ಕ್ಷಣವೇ ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಕಾರ್ಯಾಚರಣೆಯ ವೇಳೆ ಆಕಸ್ಮಿಕವಾಗಿ ಸರ್ವೀಸ್ ರೈಫಲ್ ನಿಂದ ಗುಂಡು ಸಿಡಿದು ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ.ಗುಂಧಾ ಖಾವಾಸ್ ಪ್ರದೇಶದಲ್ಲಿ ದಿನನಿತ್ಯದ ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸ್ ಸಿಬಂದಿಯ ಸರ್ವೀಸ್ ರೈಫಲ್ ಆಕಸ್ಮಿಕವಾಗಿ ಗುಂಡು ಸಿಡಿದಿದ್ದು ಪಾದಕ್ಕೆ ಗಾಯವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next