Advertisement

CS: ಸರಕಾರಿ ವ್ಯಾಜ್ಯಗಳ ಕಾಲಮಿತಿ ನಿರ್ವಹಣೆ ಇಲಾಖೆಗಳ ಮುಖ್ಯಸ್ಥರಿಗೆ CS ಸುತ್ತೋಲೆ

12:02 AM Oct 12, 2023 | Team Udayavani |

ಬೆಂಗಳೂರು: ಸುಪ್ರೀಂಕೋರ್ಟ್‌ನಲ್ಲಿ ದಾಖಲಾಗುವ ರಾಜ್ಯ ಸರಕಾರದ ವ್ಯಾಜ್ಯಗಳನ್ನು ಸಮರ್ಪಕವಾಗಿ ಹಾಗೂ ಕಾಲಮಿತಿಯೊಳಗೆ ಜವಾಬ್ದಾರಿಯುತವಾಗಿ ನಿರ್ವಹಿಸುವ ಬಗ್ಗೆ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ತಾಕೀತು ಮಾಡಿ ಸುತ್ತೋಲೆ ಹೊರಡಿಸಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಿಳಂಬ ಇಲ್ಲವೇ ಲೋಪಗಳಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಸೂಕ್ತ ಕ್ರಮ ಜರಗಿಸಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

Advertisement

ಬಿಹಾರ ರಾಜ್ಯ ಸರಕಾರಿ ಕರ್ಮಚಾರಿ ಮಹಾ ಸಂಘ ವರ್ಸಸ್‌ ಭಾರತ ಸರಕಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಪ್ರಸ್ತುತ ರಾಜ್ಯದಲ್ಲಿ ಜಾರಿಗೆ ತಂದಿರುವ ಕರ್ನಾಟಕ ಸರಕಾರಿ ವ್ಯಾಜ್ಯ ನಿರ್ವಹಣ ಅಧಿನಿಯಮ-2023ರ ಅನ್ವಯ ಎಲ್ಲ ಇಲಾಖೆಗಳು ವ್ಯಾಜ್ಯ ನಿರ್ವಹಣೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ಕಾಲಮಿತಿಯೊಳಗೆ ಮಾಡಬೇಕು. ಅದರಂತೆ, ಪ್ರಕರಣ ದಾಖಲಾಗಿರುವ ಮಾಹಿತಿ ಲಭ್ಯವಾದ ತತ್‌ಕ್ಷಣ ಸರಕಾರದ ಪರವಾಗಿ ನ್ಯಾಯವಾದಿಗಳನ್ನು ನಿಯೋಜಿಸಬೇಕು. ಇನ್ನುಳಿದ ಕಾನೂನು ಪ್ರಕ್ರಿಯೆಗಳನ್ನು ತ್ವರಿತ ರೀತಿಯಲ್ಲಿ ಕೈಗೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ವಿಳಂಬ ಮಾಡಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಸೂಕ್ತ ಕಾನೂನು ಕ್ರಮ ಕ್ರಮ ಜರಗಿಸಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next