Advertisement

ಮುಂಬಡ್ತಿ ನೀಡಲು ಸಿಎಸ್‌ಗೆ ಮನವಿ

11:20 PM May 13, 2019 | Team Udayavani |

ಬೆಂಗಳೂರು: ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಆಧರಿಸಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ತಡೆ ಹಿಡಿರುವ ಮುಂಬಡ್ತಿಗಳನ್ನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಿ ನೌಕರರು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಅವರಿಗೆ ಮನವಿ ಮಾಡಿದ್ದಾರೆ.

Advertisement

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್‌.ಕೆ. ರಾಮು ನೇತೃತ್ವದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಅವರಿಗೆ ಮನವಿ ಸಲ್ಲಿಸಿದ್ದು, ಬಿ.ಕೆ. ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮುಂಬಡ್ತಿ ಪ್ರಕರಣ ವಿಚಾರಣೆ ಹಂತದಲ್ಲಿದ್ದರಿಂದ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಮುಂಬಡ್ತಿಯನ್ನು ತಡೆ ಹಿಡಿದಿತ್ತು.

ಇದರಿಂದ ಹಲವು ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸರ್ಕಾರಿ ನೌಕರರಿಗೆ ಅನ್ಯಾಯವಾಗುತ್ತಿದೆ. ಈಗ ಸುಪ್ರೀಂ ಕೋರ್ಟ್‌ ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ನೀಡಿರುವುದರಿಂದ, ಸೇವಾ ನಿವೃತ್ತಿ ಹೊಂದಲಿರುವ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಅನುಕೂಲ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next