Advertisement

ಕಡತ ವಿಲೇವಾರಿ ಯಜ್ಞಕ್ಕೆ ಸಿಎಸ್‌ ಸೂಚನೆ

11:02 PM Feb 26, 2020 | Lakshmi GovindaRaj |

ಬೆಂಗಳೂರು: ಸರ್ಕಾರದ ಇಲಾಖೆಗಳಲ್ಲಿ ಬಾಕಿ ಕಡತಗಳನ್ನು ವಿಲೇವಾರಿ ಮಾಡಲು ಯಜ್ಞದಂತೆ ಕಾರ್ಯ ನಿರ್ವಹಿಸಲು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೂ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿ, ಪ್ರತಿಯೊಂದು ಇಲಾಖೆಯಲ್ಲಿ ಕಡತ ವಿಲೇವಾರಿಯಾಗದೇ ಬಾಕಿ ಉಳಿದಿರುವುದಕ್ಕೆ ಕಾರಣ ಹಾಗೂ ಕೆಳ ಹಂತದಲ್ಲಿ ಅನಗತ್ಯವಾಗಿ ಕಡತಗಳನ್ನು ಇಟ್ಟುಕೊಂಡು ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಕಡತಗಳು ವಿಲೇವಾರಿಯಾಗದೇ ಬಾಕಿ ಉಳಿದಿದ್ದರಿಂದ ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಆರೋಪ ಕೇಳಿ ಬಂದಿತ್ತು. ಹೀಗಾಗಿ, ಯಡಿಯೂರಪ್ಪ ಅವರು, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಜಯ ಭಾಸ್ಕರ್‌ ಅವರು ಅಧಿಕಾರಿಗಳ ಸಭೆ ನಡೆಸಿ, ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next