Advertisement

ಸಚಿವರ ಹೊಸ ಕಾರಿಗೆ ಸಿಎಸ್‌ ರತ್ನಪ್ರಭಾ ಬ್ರೇಕ್‌

06:30 AM Jun 23, 2018 | Team Udayavani |

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿರುವ ಹಿನ್ನೆಲೆಯಲ್ಲಿ ಹೊಸ ಸಚಿವರ ಹೊಸ ಕಾರು ಬೇಡಿಕೆಗೆ ಮುಖ್ಯ ಕಾರ್ಯದರ್ಶಿ “ಬ್ರೇಕ್‌’ ಹಾಕಿದ್ದಾರೆ.

Advertisement

ಹೊಸ ಕಾರು ಬೇಕೆಂಬ ಸಚಿವರ ಬೇಡಿಕೆ ಹಿನ್ನೆಲೆಯಲ್ಲಿ ಹೊಸ ಕಾರುಗಳ ಖರೀದಿಗೆ ಸಿದ್ಧಪಡಿಸಲಾಗಿದ್ದ ಪ್ರಸ್ತಾವನೆಯನ್ನು ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಾಪಸ್‌ ಕಳುಹಿಸಿದ್ದಾರೆಂದು ಹೇಳಲಾಗಿದೆ.

ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ, ಆರೋಗ್ಯ ಸಚಿವ ಶಿವಾನಂದ ಪಾಟೀಲ್‌, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌ ಅವರು ಹೊಸ ಕಾರು ಖರೀದಿಗೆ ಅನುಮತಿ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಮುಖ್ಯ ಕಾರ್ಯದರ್ಶಿ ಒಪ್ಪಿಗೆ ನೀಡಿಲ್ಲ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next