ಮುಂಬೈ: ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಸಿಎಸ್ ಕೆ ತಂಡದ ಸ್ಟಾರ್ ಬೌಲರ್ ದೀಪಕ್ ಚಾಹರ್ ಅವರು ಬೆನ್ನು ನೋವಿನ ಕಾರಣದಿಂದ ಸಂಪೂರ್ಣ ಕೂಟದಿಂದಲೇ ಹೊರಬಿದ್ದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಗಾಯಗೊಂಡಿದ್ದ ದೀಪಕ್ ಚಾಹರ್ ಇನ್ನೂ ಚೇತರಿಸಿಕೊಂಡಿಲ್ಲ. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಹರ್ ಈ ಬಾರಿಯ ಕೂಟಕ್ಕೆ ಲಭ್ಯವಾಗುವುದಿಲ್ಲ ಎಂದು ವರದಿ ತಿಳಿಸಿದೆ.
ಫೆಬ್ರವರಿಯಲ್ಲಿ ನಡೆದಿದ್ದ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ದೀಪಕ್ ಚಾಹರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಬರೋಬ್ಬರಿ 14 ಕೋಟಿ ರೂ ನೀಡಿ ಖರೀದಿ ಮಾಡಿತ್ತು.
ಇದನ್ನೂ ಓದಿ:ಜನರೇಟರ್ ಬಾಡಿಗೆಗೆ ಪಡೆದು ಪಂದ್ಯ ವೀಕ್ಷಿಸಿದ್ದೆ: ಆರ್ ಸಿಬಿ ಬೌಲರ್ ಆಕಾಶ್ ದೀಪ್
ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿಯ ಕೂಟದಲ್ಲಿ ನಿರಾಶಾದಾಯಕ ಪ್ರದರ್ಶನ ತೋರಿದೆ. ಆಡಿದ ನಾಲ್ಕೂ ಪಂದ್ಯಗಳಲ್ಲಿ ಸೋಲನುಭವಿಸಿದೆ. ನೂತನ ನಾಯಕ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಸಿಎಸ್ ಕೆ ಒಂದೂ ಜಯ ಸಾಧಿಸಿಲ್ಲ.
ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.