ಚಿಕ್ಕಮಗಳೂರು : ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿರುದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
Advertisement
ಹಲವು ಬಾರಿ ವೈಯುಕ್ತಿಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಸಿ.ಟಿ.ರವಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಸಿ.ಟಿ.ರವಿ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಮಾನನಷ್ಟ ಮೊಕದಮೆ ದಾಖಲು ಮಾಡಿದ್ದಾರೆ. ನ್ಯಾಯಾಲಯ ಜ.21 ಕ್ಕೆ ಸಿ.ಟಿ.ರವಿ ಹಾಗೂ ಸಾಕ್ಷಿದಾರರಿಗೆ ಹೇಳಿಕೆ ಪಡೆಯಲು ದಿನಾಂಕ ನಿಗದಿ ಮಾಡಿದೆ.
ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಮೈಸೂರಿನಲ್ಲಿ ಹಲವು ಬಾರಿ ಹೇಳಿಕೆ ನೀಡಿದ್ದರು.