Advertisement

ಸಿ.ಟಿ. ರವಿ ಪ್ರಚಾರ ವೇಳೆ ಗಲಾಟೆ

06:00 AM May 09, 2018 | Team Udayavani |

ಚಿಕ್ಕಮಗಳೂರು: ಪ್ರಚಾರಕ್ಕೆ ತೆರಳಿದ್ದ ಶಾಸಕ ಸಿ.ಟಿ.ರವಿ ಅವರನ್ನು ಪ್ರಚಾರ ಮಾಡದಂತೆ ತಡೆದ ಸಂದರ್ಭದಲ್ಲಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆದಿದೆ. ನಗರದ ಕೆಂಪನಹಳ್ಳಿ ಬಡಾವಣೆಗೆ ಮಂಗಳ ವಾರ ಶಾಸಕ ಸಿ.ಟಿ.ರವಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು. ಎತ್ತಿನ ಗಾಡಿಯ ಮೇಲೆ ಕುಳಿತು ಪ್ರಚಾರ ಮಾಡುತ್ತಿದ್ದಾಗ ಅಲ್ಲಿಗೆ ಬಂದ ಕೆಲವರು ಈ ಬಡಾವಣೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಈಗ ಚುನಾವಣಾ ಸಂದರ್ಭದಲ್ಲಿ ಪ್ರಚಾರಕ್ಕೆ ಬಂದಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.

Advertisement

ಕೆಲವರು ಕಾಂಗ್ರೆಸ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ, ನೂಕಾಟವೂ ನಡೆಯಿತು. ಸಿ.ಟಿ.ರವಿ ವಿರುದ್ಧ ಕೆಲವರು ಅವಾಚ್ಯ ಶಬ್ದಗಳಿಂದ ಮಾತನಾಡಿದಾಗ ಪರಿಸ್ಥಿತಿ ಉದ್ವಿಗ್ನಕ್ಕೆ ತಿರುಗುವಂತಾಗಿತ್ತು. ಎರಡೂ ಪಕ್ಷಗಳ ಮುಖಂಡರು ಮಧ್ಯೆ ಪ್ರವೇಶಿಸಿ ಸಮಾದಾನ ಪಡಿಸಿದ ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.

ಮಾಡಾಳ್‌ ವಿರೂಪಾಕ್ಷಪ್ಪ ಮನೆ ಮೇಲೆ ಐಟಿ ದಾಳಿ
ದಾವಣಗೆರೆ: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಡಾಳ್‌ ವಿರೂಪಾಕ್ಷಪ್ಪ ಮನೆ ಮೇಲೆ ಮಂಗಳವಾರ ಐಟಿ ದಾಳಿ ನಡೆದಿದೆ. ಹುಬ್ಬಳ್ಳಿಯಿಂದ ಆಗಮಿ ಸಿರುವ ನಾಲ್ವರು ಐಟಿ ಅಧಿಕಾರಿಗಳ ತಂಡ ಸ್ಥಳೀಯ ಪೊಲೀಸರ ಸಹಕಾರ ದೊಂದಿಗೆ ಮಾಡಾಳ್‌ ವಿರೂಪಾಕ್ಷಪ್ಪ ಅವರ ಚನ್ನೇಶಪುರ ಗ್ರಾಮದಲ್ಲಿರುವ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು. ಐಟಿ
ದಾಳಿ ನಡೆದಾಗ ಮಾಡಾಳ್‌ ವಿರೂಪಾಕ್ಷಪ್ಪ ಮನೆಯಲ್ಲಿಯೇ ಇದ್ದರು. ತಮ್ಮ ಹಣಕಾಸು ವ್ಯವಹಾರ ಕುರಿತಂತೆ ವಿವರಣೆ ನೀಡುವಂತೆ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next