Advertisement

ದೇಶ ವಿಭಜಕ ಶಕ್ತಿಗಳನ್ನು ಸರಕಾರ ಬ್ಯಾನ್ ಮಾಡಿದೆ, ಇನ್ನು ಸಮಾಜದ ಸರದಿ –ಸಿ.ಟಿ. ರವಿ

08:41 AM Sep 28, 2022 | Team Udayavani |

ಬೆಂಗಳೂರು: ಐಸಿಸ್ ಮಾದರಿಯ ಉಗ್ರಗಾಮಿಗಳನ್ನ ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್ಯುದ್ಧದ, ದೇಶದ್ರೋಹದ  ಸಂಚನ್ನು ಮಾಡುತ್ತಿದ್ದ ಪಿ ಎಫ್ ಐ ಹಾಗು ಅದರ ಸಹ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು  ಸ್ವಾಗತಿಸುತ್ತೇನೆ ಹಾಗು ಸರಕಾರವನ್ನು ಅಭಿನಂದಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.

Advertisement

ಸರಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆ, ಇಷ್ಟು ಸಾಕಾಗುವುದಿಲ್ಲ. ಸಮಾಜವು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ. ವಿದ್ರೋಹಿ ಹಾಗು ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕಾಗಿದೆ. ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟಿಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ದೃಷ್ಟಿಯ ರಾಜಕಾರಣ ಮಾಡಬಾರದು ಎಂದು ಹೇಳಿದ್ದಾರೆ.

ದೇಶದ ಭದ್ರತೆ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ, ದೇಶಪ್ರೇಮಿ ಮುಸ್ಲಿಮರು ಯೋಚನೆ ಮಾಡಬೇಕಾದ ಅಗತ್ಯ ಮತ್ತು ರಾಷ್ಟ್ರ ವಿರೋಧಿ ಹಾಗು ಮತಾಂಧತೆಯ ವಿರುದ್ಧ ಅರಿವು  ಮೂಡಿಸಬೇಕಾಗಿದೆ ಎಂದರು.

ನಿಷೇಧದ ನಂತರ ಪಿ ಎಫ್ ಐ ಸಂಘಟನೆಗೆ ಸೇರಿದ ದುಷ್ಟ ಶಕ್ತಿಗಳು ಭೂಗತರಾಗಿ ಕಾರ್ಯನಿರ್ವಹಿಸುವ, ಸಮಾಜವನ್ನು. ಪ್ರಚೋದಿಸುವ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಇಂತಹ ಯಾವುದೇ ಘಟನೆಗಳು ಗಮನಕ್ಕೆ ಬಂದರೆ  ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಮುಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಕಾನೂನಿನ ಜೊತೆ ಕೈ ಜೋಡಿಸಲು ಮನವಿ ಮಾಡುತ್ತೇನೆ ಎಂದು ಸಿ.ಟಿ. ರವಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next