ಚಿಕ್ಕಮಗಳೂರು: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಲ್ಲಿ ಟಿಕೆಟ್ ಫೈಟ್ ನಡೆಯುತ್ತಿರುವ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ರೀತಿ ಹೇಳಿಕೆ ನೀಡಿದ ಅವರು, ಭವಾನಿ ರೇವಣ್ಣನಿಗೆ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ.
ನಾನು ಸಹೋದರಿ ಭವಾನಿಯವರ ಹೇಳಿಕೆಯನ್ನು ಗಮನಿಸಿದ್ದೇನೆ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ಮನೆಯಲ್ಲಿ ಗಲಾಟೆಯನ್ನು ಹೆಚ್ಚಿಸಲು ಬಯಸುವುದಿಲ್ಲ. ನನ್ನ ಮನಸ್ಸಿನಲ್ಲಿ ಭವಾನಿ ಅಕ್ಕ ನಮ್ಮ ಪಾರ್ಟಿಯಿಂದ ಅಭ್ಯರ್ಥಿಯಾಗಬೇಕು ಎನ್ನುವುದಿತ್ತು. ಭವಾನಿ ಅವರು ಹೊಳೆನರಸೀಪುರದಿಂದ ನಮ್ಮ ಪಕ್ಷದ ಅಭ್ಯರ್ಥಿಯಾಗಲಿ. ಭವಾನಿಗಿಂತ ಉತ್ತಮ ಅಭ್ಯರ್ಥಿ ಹೊಳೆನರಸೀಪುರಕ್ಕೆ ಬೇರೊಬ್ಬರಿಲ್ಲ ಎಂದರು.
ಇದನ್ನೂ ಓದಿ:ಆಗ-ಈಗ-ಕಣ ಕಥನ: ಆಗ ಚುನಾವಣೆ ಎಂದರೆ ಎಲ್ಲೆಡೆ ಹಬ್ಬದ ವಾತಾವರಣ
Related Articles
ಹಾಸನ ಜಿಲ್ಲೆಯ ರಾಜಕಾರಣವನ್ನು ಹತ್ತಿರದಿಂದ ಗಮನಿಸಿದ್ದೇನೆ. ರೇವಣ್ಣ ಮತ್ತು ಭವಾನಿಯ ನಡುವೆ ಜಗಳ ಹಚ್ಚುವ ಕೆಲಸ ಮಾಡಲು ನನಗೆ ಇಷ್ಟವಿಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.